Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 95:6 - ಕನ್ನಡ ಸತ್ಯವೇದವು C.L. Bible (BSI)

6 ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 95:6
37 ತಿಳಿವುಗಳ ಹೋಲಿಕೆ  

ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II


ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ಅವನು 2:2 ಮೀಟರ್ ಉದ್ದ, 2:2 ಮೀಟರ್ ಅಗಲ, 1:3 ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿರಿಸಿದನು.ಇಸ್ರಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:


ಒಂದು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ ಪ್ರಾರ್ಥನೆಮಾಡುತ್ತಾ,


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.


ಆಮೇಲೆ ದೇಹದಂಡನೆ ಮಾಡುವುದನ್ನು ಬಿಟ್ಟು, ಹರಿದ ಬಟ್ಟೆವಸ್ತ್ರಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ, ನನ್ನ ದೇವರಾದ ಸರ್ವೇಶ್ವರನ ಕಡೆಗೆ ಕೈಗಳನ್ನೆತ್ತಿ ಹೀಗೆಂದು ಪ್ರಾರ್ಥಿಸಿದೆ:


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಆದರೂ, ಆ ದಿನಗಳು ಕಳೆದ ಮೇಲೆ, ಅವರನ್ನು ಬಿಟ್ಟು ನಮ್ಮ ಪ್ರಯಾಣವನ್ನು ಮುಂದುವರಿಸಲು ಅನುವಾದೆವು. ಅವರಾದರೋ, ಮಡದಿ ಮಕ್ಕಳೊಡನೆ ಪಟ್ಟಣ ಬಿಟ್ಟು ಸಮುದ್ರತೀರದವರೆಗೂ ನಮ್ಮೊಡನೆ ಬಂದರು. ಅಲ್ಲಿ ನಾವೆಲ್ಲರೂ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಆ ದಿನದಂದು ಜನರು ತಮ್ಮ ಕೈಯಿಂದ ಕಟ್ಟಿದ ಬಲಿಪೀಠಗಳನ್ನಾಗಲೀ, ಬೆರಳುಗಳಿಂದ ನಿರ್ಮಿಸಿದ ಆಶೇರಾ ದೇವತೆಯ ಸ್ತಂಭಗಳನ್ನಾಗಲೀ, ಧೂಪವೇದಿಕೆಗಳನ್ನಾಗಲೀ ಪೂಜಿಸದೆ ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ, ಇಸ್ರಯೇಲಿನ ಪರಮಪಾವನ ಸ್ವಾಮಿಯ ಕಡೆ ತಿರುಗಿಕೊಳ್ಳುವರು.


ಅರಣ್ಯವಾಸಿಗಳು ಅರಸನಿಗೆ ಅಡ್ಡಬೀಳಲಿ I ಆತನ ಕಡುವೈರಿಗಳು ನೆಲದ ಮಣ್ಣು ಮುಕ್ಕಲಿ II


ಆಕಾಶದ ಕಡೆಗೆ ಕೈಯೆತ್ತಿ ಸರ್ವೇಶ್ವರನ ಬಲಿಪೀಠದ ಮುಂದೆ ಮೊಣಕಾಲೂರಿದ್ದ ಸೊಲೊಮೋನನು ಈ ಪ್ರಕಾರ ಸರ್ವೇಶ್ವರನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತನು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.


ಅನಂತರ ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲಕ್ಕೆ ಕುಸಿದು, ಪ್ರಾರ್ಥಿಸುತ್ತಾ, “ಸಾಧ್ಯವಾದರೆ, ಈ ವಿಷಮ ಗಳಿಗೆಯು ನನ್ನಿಂದ ದೂರವಾಗಲಿ,” ಎಂದು ದೇವರನ್ನು ಬಿನ್ನವಿಸಿದರು.


ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.


“ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”


ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ಆದರೆ ‘ನಮ್ಮನ್ನು ಸೃಷ್ಟಿಸಿದ ಕರ್ತನೆಲ್ಲಿ? ಕತ್ತಲಲ್ಲೂ ಕೀರ್ತನೆ ಹಾಡಬಲ್ಲವನೆಲ್ಲಿ?


ಯೊವಾನ್ನನೆಂಬ ನಾನೇ ಇವುಗಳನ್ನೆಲ್ಲಾ ಕೇಳಿದವನು ಮತ್ತು ಕಂಡವನು. ಇವುಗಳನ್ನು ಕಂಡು ಕೇಳಿದಾಗ, ಇವುಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಆತನ ಪಾದಗಳಿಗೆ ಅಡ್ಡಬಿದ್ದೆ.


ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


“ನೀನು ನನಗೆ ಅಡ್ಡಬಿದ್ದು ಆರಾಧಿಸುವೆಯಾದರೆ ಇವೆಲ್ಲವನ್ನು ನಿನಗೆ ಕೊಡಬಲ್ಲೆ,” ಎಂದಿತು.


ದಹನಬಲಿ ಸಮರ್ಪಣೆಯು ಮುಗಿಯುವವರೆಗೆ ಸಭೆಸೇರಿದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಇದ್ದರು; ಗಾಯಕರು ಗಾನ ಮಾಡುತ್ತಾ ಇದ್ದರು; ತುತೂರಿ ಊದುವವರು ಊದುತ್ತಾ ಇದ್ದರು.


ದಹನಬಲಿ ಸಮರ್ಪಣೆ ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II


ನನ್ನ ಅಂತರಂಗವನು ಉಂಟುಮಾಡಿದಾತ ನೀನು I ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II


ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು