Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 95:7 - ಕನ್ನಡ ಸತ್ಯವೇದವು C.L. Bible (BSI)

7 ಆತನೆಮ್ಮ ದೇವರು, ನಾವು ಆತನ ಕೈಮಂದೆ I ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ನಮ್ಮ ದೇವರು; ನಾವು ಅವರ ಹುಲ್ಲುಗಾವಲಿನ ಪ್ರಜೆಗಳಾಗಿದ್ದೇವೆ, ನಾವು ಅವರು ಪರಿಪಾಲಿಸುವ ಮಂದೆಯೂ ಆಗಿದ್ದೇವೆ. ನೀವು ಈ ಹೊತ್ತು ಅವರ ಸ್ವರಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 95:7
28 ತಿಳಿವುಗಳ ಹೋಲಿಕೆ  

ಈ ಕಾರಣದಿಂದಲೇ ದೇವರು, “ಇಂದು” ಎಂದು ಬೇರೊಂದು ದಿನವನ್ನು ಗೊತ್ತುಮಾಡುತ್ತಾರೆ. ಈ ದಿನವನ್ನು ಕುರಿತೇ ದೀರ್ಘಕಾಲದ ನಂತರ ದಾವೀದನ ಮುಖಾಂತರ : “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು,” ಎಂದು ಹೇಳಿದ್ದಾರೆ.


“ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು ಮರುಭೂಮಿಯಲಿ ದೇವರ ವಿರುದ್ಧ ದಂಗೆಯೆದ್ದವರವರು.”


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II


ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II


ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ I ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ I ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ II


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಇತ್ತನೆಮ್ಮ ದೇವನು ಆಶೀರ್ವಾದವನು I ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು II


ಕೇಳಿ, ನಾನು ಹೇಳುವ ಮಹತ್ವಪೂರ್ಣವಾದ ವಿಷಯವನ್ನು ನನ್ನ ನಾಲಿಗೆ ನುಡಿಯುವ ಯಥಾರ್ಥವಾದ ಸಂಗತಿಯನ್ನು


ಸರ್ವೇಶ ನಮ್ಮ ದೇವನೆಂಬುದು ಪ್ರಕಟಿತ I ಆತನಿತ್ತ ತೀರ್ಪು ವಿಶ್ವವ್ಯಾಪ್ತ II


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು