Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:11 - ಕನ್ನಡ ಸತ್ಯವೇದವು C.L. Bible (BSI)

11 ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು I ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ ಅದರಲ್ಲಿರುವದೆಲ್ಲವೂ ಘೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಕಾಶಮಂಡಲವೇ, ಸಂತೋಷಪಡು! ಭೂಮಿಯೇ, ಉಲ್ಲಾಸಪಡು! ಸಮುದ್ರವೇ ಮತ್ತು ಸಮುದ್ರದೊಳಗಿರುವ ಸರ್ವಸ್ವವೇ, ಆನಂದಘೋಷ ಮಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಕಾಶವು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:11
12 ತಿಳಿವುಗಳ ಹೋಲಿಕೆ  

ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಭೂಮ್ಯಾಕಾಶಗಳು ಆತನನು ಕೊಂಡಾಡಲಿ I ಸಾಗರಗಳು, ಜಲಚರಗಳು ಆತನನು ಭಜಿಸಲಿ II


ಇದೆ ಪ್ರಭುವಿನ ಕೈಯಲಿ ರಾಜ್ಯಾಧಿಕಾರ I ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ I ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ II


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು