Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:3 - ಕನ್ನಡ ಸತ್ಯವೇದವು C.L. Bible (BSI)

3 ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನಾಂಗಗಳಲ್ಲಿ ಆತನ ಘನತೆಯನ್ನೂ ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನ ಮಹಿಮೆಯನ್ನು ಜನಾಂಗಗಳಿಗೆ ಪ್ರಕಟಿಸಿರಿ. ಆತನ ಅಮೋಘ ಕಾರ್ಯಗಳ ಕುರಿತು ಸಾರಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:3
15 ತಿಳಿವುಗಳ ಹೋಲಿಕೆ  

ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಪರಾತ್ಪರನೇ, ಮಾಡುವೆನು ನಿನ್ನ ನಾಮಸ್ತುತಿ I ಹರ್ಷಾನಂದಗೊಳ್ವೆನು‍ ದೇವಾ, ನಿನ್ನಲ್ಲತಿ II


ನಿನ್ನ ಸ್ತುತಿಸುವೆನು ಪ್ರಭು ಜನಾಂಗಗಳ ಮುಂದೆ I ಸಂಕೀರ್ತಿಸುವೆನು ನಿನ್ನನು ರಾಷ್ಟ್ರಗಳ ಮಧ್ಯೆ II


ಸ್ತುತಿಸಿರಿ ಆತನ ಮಹತ್ಕಾರ್ಯಗಳಿಗಾಗಿ I ಆತನ ಮಹಾಪ್ರಭಾವಕ್ಕೆ ಅನುಗುಣವಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು