Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:6 - ಕನ್ನಡ ಸತ್ಯವೇದವು C.L. Bible (BSI)

6 ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿಸೌಂದರ್ಯ ಆತನ ಗರ್ಭಗುಡಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲಸೌಂದರ್ಯಗಳೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನ ಎದುರಿನಲ್ಲಿ ಮಹಿಮೆಯೂ ವೈಭವವೂ ಕಂಗೊಳಿಸುತ್ತಿವೆ. ಆತನ ಪವಿತ್ರಾಲಯದಲ್ಲಿ ಶಕ್ತಿಯೂ ಸೌಂದರ್ಯವೂ ತುಂಬಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ; ಬಲವೂ, ಸೌಂದರ್ಯವೂ ಅವರ ಪರಿಶುದ್ಧ ಸ್ಥಳದಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:6
13 ತಿಳಿವುಗಳ ಹೋಲಿಕೆ  

ಭಜಿಸು ನನ್ನ ಮನವೇ, ಭಜಿಸು, ಪ್ರಭುವನು I ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I ಮಹಿಮೆ ಪ್ರತಾಪಗಳಿಂದ ಭೂಷಿತನು II


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿ, ಸಂತೋಷ ಆತನ ಗರ್ಭಗುಡಿಯಲಿ II


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


ಈಯುವುವು ಜಿಂಕೆಗಳು, ನಗ್ನವಾಗುವುವು ವೃಕ್ಷಗಳು I ಜಯಜಯ ಘೋಷಮಾಡುವರೆಲ್ಲರು ಆತನಾಲಯದೊಳು II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು I ತಾರಾಮಂಡಲ ತೋರುತಿದೆ ದೇವರ ಕೈಕೃತಿಗಳನು II


ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ I ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ I ಬೆಳಗಿದೆ ನಿನ್ನ ವೈಭವ ಗಗನಾದ್ಯಂತ II


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು