Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:1 - ಕನ್ನಡ ಸತ್ಯವೇದವು C.L. Bible (BSI)

1 ಇದೆ ಪ್ರಭುವಿನ ಕೈಯಲಿ ರಾಜ್ಯಾಧಿಕಾರ I ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ I ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:1
26 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


“ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ.


ನಮ್ಮ ಪೂರ್ವಜ ದಾವೀದನ ಸಾಮ್ರಾಜ್ಯ ಉದಯವಾಗಲಿದೆ; ಅದಕ್ಕೆ ಶುಭವಾಗಲಿ ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ !” ಎಂದು ಘೋಷಿಸುತ್ತಿದ್ದರು.


ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ದೇಶ - ಭಾಷಾ - ಕುಲ - ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ.


“ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.


ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ.


ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.


ದೂರದೇಶದವರು ಕಂಡು ಬೆರಗಾದರು ಭೂಮಿಯ ಕಟ್ಟಕಡೆಯವರು ನಡುಗಿದರು ಎಲ್ಲರೂ ಇಲ್ಲಿಗೆ ನೆರೆದುಬಂದಿಹರು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


“ಭಯಭಕುತಿಯಿಂದ ಪ್ರಭುವಿಗೆ ಸೇವೆಮಾಡಿರಿ I ನಡುನಡುಗುತ ಆತನ ಪಾದಪೂಜೆ ಮಾಡಿರಿ” II


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು