Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:11 - ಕನ್ನಡ ಸತ್ಯವೇದವು C.L. Bible (BSI)

11 ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀತಿವಂತರಿಗೋಸ್ಕರ ಪ್ರಕಾಶವೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಬಿತ್ತಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀತಿವಂತರಿಗೋಸ್ಕರ ಬೆಳಕೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಪ್ರಕಾಶಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀತಿವಂತನಿಗೋಸ್ಕರ ಬೆಳಕೂ, ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:11
17 ತಿಳಿವುಗಳ ಹೋಲಿಕೆ  

ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನಿನ್ನ ಯೋಜನೆಗಳು ಸಫಲವಾಗುವುವು ನಿನ್ನ ಮಾರ್ಗಗಳು ಪ್ರಜ್ವಲಿಸುವುವು.


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.


ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


ಅಲ್ಲಿನ ಯೆಹೂದ್ಯರು ಹರ್ಷಾನಂದ ಪ್ರಭಾವಗಳಿಂದ ಪುಳಕಿತರಾದರು.


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ.


ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!


ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು