Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:2 - ಕನ್ನಡ ಸತ್ಯವೇದವು C.L. Bible (BSI)

2 ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮುಗಿಲೂ ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ನೀತಿನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:2
18 ತಿಳಿವುಗಳ ಹೋಲಿಕೆ  

ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.


ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ಮೋಶೆಯೊಬ್ಬನೇ ದೇವರಿದ್ದ ಕಾರ್ಮುಗಿಲನ್ನು ಸಮೀಪಿಸಿದ್ದನು. ಜನರು ದೂರದಲ್ಲೇ ನಿಂತಿದ್ದರು.


ನನಗೆ ವಿಧಿತವಾದುವುಗಳನೆ ಕಾರ್ಯಗೊಳಿಸುತ್ತಾನೆ ಈ ಪರಿಯ ಹಲವಾರು ಯೋಜನೆಗಳು ಆತನಲ್ಲಿವೆ.


ಪೂರ್ಣಚಂದ್ರನನ್ನು ಮರೆಮಾಡುತ್ತಾನೆ ಅದರ ಮುಂದೆ ಮೋಡ ಕವಿಸುತ್ತಾನೆ.


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು