Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:3 - ಕನ್ನಡ ಸತ್ಯವೇದವು C.L. Bible (BSI)

3 ಚಲಿಸುತ್ತಿದೆ ಬೆಂಕಿ ಆತನ ಮುಂದುಗಡೆ I ಸುಡುತ್ತದೆ ಆತನ ವೈರಿಗಳನು ಎಲ್ಲೆಡೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೆಂಕಿಯು ಆತನ ಮುಂಗಡೆಯಿಂದ ಹೋಗಿ ಸುತ್ತಲೂ ಆತನ ವೈರಿಗಳನ್ನು ದಹಿಸಿ ಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬೆಂಕಿಯು ಆತನ ಮುಂದೆ ಹೋಗಿ ಆತನ ಶತ್ರುಗಳನ್ನು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬೆಂಕಿಯು ಅವರ ಮುಂದೆ ಹೋಗಿ ಅವರ ವೈರಿಗಳನ್ನು ಸುತ್ತಲೂ ದಹಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:3
19 ತಿಳಿವುಗಳ ಹೋಲಿಕೆ  

ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಹೊರಬಂದಿತು ಹೊಗೆ ಆತನ ಮೂಗಿಂದ I ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ I ಕಾದುಕೆಂಡವಾಗಿಸಿತದು ಎದುರಿಗೆ ಸಿಕ್ಕಿದ್ದನೆಲ್ಲ II


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ಸಾಗುತಿದೆ ವ್ಯಾಧಿ ಆತನ ಮುಂದೆ ಬರುತಿದೆ ಮೃತ್ಯು ಆತನ ಹಿಂದೆ.


ಯಾವನಾದರು ಇವರಿಗೆ ಕೇಡು ಬಗೆದರೆ ಇವರ ಬಾಯಿಯಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುತ್ತದೆ. ಇವರಿಗೆ ಕೇಡು ಬಗೆಯಬೇಕೆಂದಿರುವವನು ಹೀಗೆಯೇ ಹತನಾಗುತ್ತಾನೆ.


ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ಮುಖಾಮುಖಿಯಾಗಿ ನಮ್ಮೊಂದಿಗೆ ಮಾತಾಡಿದರು.


ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ.


ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಆಕಾಶವನೆ ಬಾಗಿಸಿ ಆತನಿಳಿದು ಬರಲು I ಸೇರಿತು ಆತನ ಕಾಲಡಿ ಕಾರ್ಮುಗಿಲು II


ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು