ಕೀರ್ತನೆಗಳು 97:7 - ಕನ್ನಡ ಸತ್ಯವೇದವು C.L. Bible (BSI)7 ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ! ಅಧ್ಯಾಯವನ್ನು ನೋಡಿ |