Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 98:1 - ಕನ್ನಡ ಸತ್ಯವೇದವು C.L. Bible (BSI)

1 ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡಿಸಿದ್ದಾನೆ. ಆತನ ಬಲಗೈಯೂ ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 98:1
39 ತಿಳಿವುಗಳ ಹೋಲಿಕೆ  

ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ಹೊಸಗೀತೆಯನು ಹಾಡಿರಿ ಪ್ರಭುವಿಗೆ I ವಿಶ್ವವೆಲ್ಲವು ಹಾಡಲಿ ಆತನಿಗೆ II


ನೂತನ ಕೀರ್ತನೆಯನು ಆತನಿಗೆ ಹಾಡಿರಿ I ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ II


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಯೆಹೂದ್ಯರೂ ಯೆಹೂದ್ಯ ಧರ್ಮಾವಲಂಬಿಗಳೂ ಆದ ಅನ್ಯರೂ, ಕ್ರೇಟ್ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಲ್ಲೇ ಕೇಳುತ್ತಿದ್ದೇವಲ್ಲಾ!” ಎಂದು ಅಚ್ಚರಿಯನ್ನು ವ್ಯಕ್ತಪಡಿಸಿದರು.


ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ I ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ II


“ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”


ಸುತ್ತಲು ನೋಡಿದೆ, ಯಾರು ಇರಲಿಲ್ಲ ಸಹಾಯಮಾಡಲು ನನಗೆ ಒತ್ತಾಸೆಗೆ ಒಬ್ಬನೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆ. ಆಗ ನನ್ನ ಭುಜಬಲವೇ ಜಯಕ್ಕೆ ಅಡಿಪಾಯವಾಯಿತು.


ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.


ಅಲ್ಲೆಲೂಯ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.


ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II


ಮಹತ್ಕಾರ್ಯವೆಸಗಬಲ್ಲ ಆ ಏಕೈಕನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಆತನ ದಾಸ ಅಬ್ರಹಾಮನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II


ಅದ್ಭುತಗಳನು ನಡೆಸುವಂತಹ ದೇವ ನೀನೆಮಗೆ I ತೋರ್ಪಡಿಸಿದೆ ನಿನ್ನಾ ಪರಾಕ್ರಮವನು ಜನತೆಗೆ II


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಪ್ರಭುವಿನ ವಾಕ್ಯ ಹೀಗೆ ಹಬ್ಬಿಹರಡಿ ಪ್ರಬಲವಾಯಿತು.


ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II


ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ಹಾಡಿರಿ ಸರ್ವೇಶ್ವರನಿಗೆ ಸ್ತುತಿಯನು ಎಸಗಿಹನಾತ ಮಹಿಮಾಕಾರ್ಯಗಳನು ತಿಳಿಸಿರಿ ಜಗದಾದ್ಯಂತಕೆ ಈ ವಿಷಯವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು