Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 98:5 - ಕನ್ನಡ ಸತ್ಯವೇದವು C.L. Bible (BSI)

5 ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ I ಭಜಿಸಿರಿ ಆತನನು ವಾದ್ಯಮೇಳದೊಂದಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹಾರ್ಪ್‌ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ. ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸುತ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರಿಗೆ ಕಿನ್ನರಿಯಿಂದ ಗಾನಮಾಡಿರಿ. ಕಿನ್ನರಿಯಿಂದಲೂ, ಕೀರ್ತನೆಯ ಶಬ್ದದಿಂದಲೂ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 98:5
11 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ I ಕೀರ್ತಿಸಿ ದಶತಂತಿ ವೀಣೆಯನು ಬಾರಿಸುತ II


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.


ಸ್ವರಮಂಡಲ, ಕಿನ್ನರಿ, ತಾಳಗಳೊಂದಿಗೆ ಸಂಭ್ರಮದಿಂದ ವಾದ್ಯಗಳನ್ನು ಬಾರಿಸುವುದಕ್ಕೂ ಹಾಡುವುದಕ್ಕೂ ವಿವಿಧ ಲೇವಿಯರನ್ನು ನೇಮಿಸಬೇಕೆಂದು ದಾವೀದನು ಲೇವಿಯರ ನಾಯಕನಿಗೆ ಆಜ್ಞಾಪಿಸಿದನು.


ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.


ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ I ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ II ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ I ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ II


ಧನ್ಯವಾದವಿತ್ತು ಹಾಡಿರಿ ಪ್ರಭುವನು I ಕಿನ್ನರಿಯೊಡನೆ ಭಜಿಸಿರಿ ನಮ್ಮ ದೇವನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು