Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 98:9 - ಕನ್ನಡ ಸತ್ಯವೇದವು C.L. Bible (BSI)

9 ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 98:9
11 ತಿಳಿವುಗಳ ಹೋಲಿಕೆ  

ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II


ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ದಲಿತರಿಗೆ ಪ್ರಭು ದುರ್ಗಸ್ಥಾನ I ಆಪತ್ತಿನಲ್ಲಿ ಆಶ್ರಯ ಸ್ಥಾನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು