Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 99:4 - ಕನ್ನಡ ಸತ್ಯವೇದವು C.L. Bible (BSI)

4 ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 99:4
17 ತಿಳಿವುಗಳ ಹೋಲಿಕೆ  

ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು