Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 99:5 - ಕನ್ನಡ ಸತ್ಯವೇದವು C.L. Bible (BSI)

5 ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಮ್ಮ ಯೆಹೋವದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, ಆತನ ಪವಿತ್ರ ಪಾದಪೀಠಕ್ಕೆ ಅಡ್ಡಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ಅವರ ಪಾದಪೀಠದಲ್ಲಿ ಆರಾಧಿಸಿರಿ. ಏಕೆಂದರೆ ಅವರು ಪರಿಶುದ್ಧರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 99:5
15 ತಿಳಿವುಗಳ ಹೋಲಿಕೆ  

ಹೋಗೋಣ ಬನ್ನಿರಿ ಆತನ ಮಂದಿರಕೆ I ಅಡ್ಡಬೀಳೋಣ ಆತನ ಪಾದಪೀಠಕೆ II


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಶೋಭೆ I ಭೂಮಂಡಲದೊಳು ಹಬ್ಬಿ ಹರಡಲಿ ನಿನ್ನಾ ಪ್ರತಿಭೆ II


ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.


ಆತ ಪರಮ ಪವಿತ್ರನು, ಸ್ತುತಿಸಲಿ ಅವರೆಲ್ಲರು I ಆತ ಘನಗಂಭೀರನು, ಸ್ತುತಿಸಲಿ ಆತನ ಶ್ರೀನಾಮವನು II


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ಕೀರ್ತಿಸಲಿ ಆತನನು ನೆರೆದ ಸಭೆಯಲಿ I ಹಾಡಿಹೊಗಳಲಿ ಹಿರಿಯರಾ ಕೂಟದಲಿ II


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.


ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು