Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 99:8 - ಕನ್ನಡ ಸತ್ಯವೇದವು C.L. Bible (BSI)

8 ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಮ್ಮ ಯೆಹೋವದೇವರೇ, ಅವರಿಗೆ ಉತ್ತರಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ ಕ್ಷವಿುಸುವ ದೇವರಾಗಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಮ್ಮ ದೇವರಾದ ಯೆಹೋವ ದೇವರೇ, ನೀವು ಅವರಿಗೆ ಉತ್ತರಕೊಟ್ಟಿದ್ದೀರಿ. ನೀವು ದುಷ್ಕೃತ್ಯಗಳಿಗಾಗಿ ಇಸ್ರಾಯೇಲರನ್ನು ದಂಡಿಸಿದರೂ ಅವರನ್ನು ಕ್ಷಮಿಸುವ ದೇವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 99:8
16 ತಿಳಿವುಗಳ ಹೋಲಿಕೆ  

ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.


ಆದರೆ ನನ್ನೊಲವು ಅವನನ್ನು ಕೈಬಿಡದು I ನನ್ನ ಪ್ರಾಮಾಣಿಕತೆಗದು ಚ್ಯುತಿಯಾಗದು II


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ಇದೊಂದು ನಿನಗೆ ತಿಳಿದಿರಲಿ: ದೇವರು ಮನುಷ್ಯರನ್ನು ಸಜ್ಜನರನ್ನಾಗಿ ಸೃಷ್ಟಿಸಿದರು; ಮನುಷ್ಯರಾದರೂ ಅನೇಕ ಸಮಸ್ಯೆಗಳನ್ನು ಕಲ್ಪಿಸಿಕೊಂಡಿದ್ದಾರೆ. ನನಗೆ ಕಂಡುಬಂದುದು ಇದುವೇ.


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ಇದರಿಂದಲಾದರೂ ಜೆರುಸಲೇಮ್ ನಗರ ನನಗೆ ಭಯಪಡುವುದು, ನಾನು ಕಲಿಸಿದ ಪಾಠವನ್ನು ಎಂದಿಗೂ ಮರೆಯದು’ ಎಂದುಕೊಂಡೆ. ಆದರೆ ಅದರ ನಿವಾಸಿಗಳು ತಮ್ಮ ನಡತೆಯನ್ನು ಕೆಡಿಸಿಕೊಳ್ಳಲು ಮತ್ತಷ್ಟು ಕಾತರರಾದರು.”


ಆದರೆ ಸರ್ವೇಶ್ವರ ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಗೊಂಡರು. ನನ್ನ ಮನವಿಯನ್ನು ಕೇಳದೆ, ‘ಸಾಕು; ಇದರ ಬಗ್ಗೆ ಇನ್ನು ನನ್ನ ಸಂಗಡ ಮಾತಾಡಬೇಡ; ನೀನು ಜೋರ್ಡನ್ ನದಿಯನ್ನು ದಾಟಕೂಡದು.


“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.


ಅದಕ್ಕೆ ಆರೋನನು, “ನಿಮ್ಮ ಹೆಂಡತಿಯರು, ಗಂಡುಮಕ್ಕಳು ಹಾಗು ಹೆಣ್ಣುಮಕ್ಕಳು ಹಾಕಿಕೊಂಡಿರುವ ಚಿನ್ನದ ಕಿವಿಯೋಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ,” ಎಂದನು.


ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.


ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು