Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ಧನಿಯಾಕ್ ಬರೆ ಹೊವ್ನ್ ಚಲುನ್, ಹರ್ ಎಕ್ ವಿಶಯಾತ್ ತೆಕಾ ಖುಶಿ ಹೊಯ್ ಸಾರ್ಕೆ ಕರುಚೆ ಮನುನ್ ತುಮಿ ಸಗ್ಳ್ಯಾ ನಮುನ್ಯಾಚೆ ಬರಿ ಕಾಮಾ ಕರಿತ್; ದೆವಾಚ್ಯಾ ಶಾನೆಪಾನಾತ್ ವಾಡುಚೆ ಮನುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:10
44 ತಿಳಿವುಗಳ ಹೋಲಿಕೆ  

ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.


ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಈ ಗುಣಗಳು ನಿಮ್ಮಲ್ಲಿ ಬೆಳೆದು ಸಮೃದ್ಧವಾಗಿದ್ದರೆ, ನಮ್ಮ ಪ್ರಭು ಯೇಸುಕ್ರಿಸ್ತರನ್ನು ಅರಿತು ಬಾಳುವುದರಲ್ಲಿ ಇವು ನಿಮ್ಮನ್ನು ಚೈತನ್ಯಪೂರ್ಣರನ್ನಾಗಿಯೂ ಫಲಪ್ರದರನ್ನಾಗಿಯೂ ಮಾಡುತ್ತವೆ.


ನೀವು ಕ್ರಿಸ್ತಯೇಸುವನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ ಐಕ್ಯತೆಯಿಂದ ಬಾಳಿರಿ.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ.


ಪ್ರಭುವಿಗೆ ಮೆಚ್ಚಿಕೆಯಾದುದು ಯಾವುದೆಂಬುದನ್ನು ಕಲಿತುಕೊಳ್ಳಿರಿ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು.


ಮಕ್ಕಳೇ, ಎಲ್ಲದರಲ್ಲೂ ನಿಮ್ಮ ತಂದೆತಾಯಿಗಳ ಮಾತು ಕೇಳಿರಿ. ಹೀಗೆ ಮಾಡಿದರೆ ಪ್ರಭುವಿಗೆ ಮೆಚ್ಚುಗೆಯಾಗುತ್ತದೆ.


ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.


ಸಮುದ್ರವು ನೀರಿನಿಂದ ತುಂಬಿ ಇರುವಂತೆ ಜಗವು ಸರ್ವೇಶ್ವರಸ್ವಾಮಿಯ ಮಹಿಮೆಯ ಜ್ಞಾನದಿಂದ ತುಂಬಿರುವುದು.


ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.


ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ.


ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಸುನ್ನತಿ ಮಾಡಿಸಿಕೊಂಡವರಿಗೆ ಅಬ್ರಹಾಮನು ಮೂಲಪಿತನಾಗಿರುವುದು ಕೇವಲ ಸುನ್ನತಿ ಪಡೆದುದರ ಕಾರಣದಿಂದಲ್ಲ. ಆದರೆ ಅವರು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಆತನು ಕೈಗೊಂಡ ವಿಶ್ವಾಸಮಾರ್ಗವನ್ನು ಅನುಸರಿಸಿದ್ದರಿಂದ.


ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.


ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.


ಇಲ್ಲಿಯ ಸಭೆಯ ಮುಂದೆ ಅವರೇ ನಿನ್ನ ಪ್ರೀತ್ಯಾದರವನ್ನು ಪ್ರಶಂಶಿಸಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು