Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:11 - ಕನ್ನಡ ಸತ್ಯವೇದವು C.L. Bible (BSI)

11 ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನ ಮಹಿಮಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷ್ಠರಾಗಿ ಆನಂದಪೂರ್ವಕವಾದ ತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಯಾವಾಗಲೂ ತೋರಿಸುವವರಾಗಿರಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆಚ್ಯಾ ಮಹಿಮೆಚ್ಯಾ ಫುರಾ ತಾಕ್ತಿಚ್ಯಾ ವೈನಾ, ಕುಶಿನ್ ಭರಲ್ಲಿ ಸಂಬಾಳ್ನಿ ಅನಿ ಸದಾ ಸರ್ವತಾಕ್ ಸೊಸ್ನಿಕಾಯ್ ದಾಕ್ವುತಲೊ ಹೊವ್ನ್ ರ್‍ಹಾವ್ಚೆ ಮನುನ್ ಅಮಿ ಮಾಗ್ನಿ ಕರಿತ್ ಹಾವ್, ತನ್ನಾ ತುಮಿ ಕುಶಿನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:11
26 ತಿಳಿವುಗಳ ಹೋಲಿಕೆ  

ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ಆದ್ದರಿಂದ ದೇವರ ಆಜ್ಞೆಗಳನ್ನು ಕೈಗೊಂಡು ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟು ನಡೆಯುವ ದೇವಜನರಲ್ಲಿ ಸಹನೆ, ಸಹಿಷ್ಣುತೆ ಇರಬೇಕು.


ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ.


ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ಆಪತ್ತುಕಾಲದಲ್ಲಿ ನೀನು ಎದೆಗುಂದಿದವನಾದರೆ ನಿನ್ನ ಬಲವು ಅಸಮರ್ಪಕವಾದುದೆ.


ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು