Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:12 - ಕನ್ನಡ ಸತ್ಯವೇದವು C.L. Bible (BSI)

12 ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬೆಳಕಿನ ರಾಜ್ಯದೊಳಗೆ ದೇವಜನರ ಬಾಧ್ಯತೆಯಲ್ಲಿ ಪಾಲುಗಾರರಾಗುವದಕ್ಕೆ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಬಾಬಾಕ್ ಧನ್ಯಾವಾದ್ ಸ್ತುತಿ ಕರಾ, ಉಜ್ವೊಡಾತ್ ಜಿವನ್ ಕರ್‍ತಲ್ಯಾ ಅಪ್ಲ್ಯಾ; ಸಗ್ಳ್ಯಾ ಭಕ್ತಾಕ್ನಿ ತೆನಿ ತಯಾರ್ ಕರುನ್ ಥವಲ್ಲೆ ಘೆವ್ಕ್ ಮನುನ್ ತೆನಿ ತುಮ್ಕಾ ಯೊಗ್ಯ್ ಹೊಯ್ ಸಾರ್ಕೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:12
50 ತಿಳಿವುಗಳ ಹೋಲಿಕೆ  

“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.


ಈ ಸುಸ್ಥಿತಿಗಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾರೆ. ಇದಕ್ಕೆಲ್ಲಾ ಖಾತರಿಯಾಗಿ ಪವಿತ್ರಾತ್ಮರನ್ನೇ ನಮಗೆ ದಯಪಾಲಿಸಿದ್ದಾರೆ.


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಅವರ ಸ್ವಂತ ಇಷ್ಟದಿಂದಲೇ ಮುಂದೆ ಬಂದಿದ್ದಾರೆ. ಹಾಗೆ ಮಾಡುವುದು ಅವರ ಕರ್ತವ್ಯವೂ ಹೌದು. ಏಕೆಂದರೆ, ಯೆಹೂದ್ಯರ ಆಧ್ಯಾತ್ಮಿಕ ಸಂಪತ್ತಿನಲ್ಲಿ ಪಾಲುಗಾರರಾಗಿರುವ ಅನ್ಯಧರ್ಮೀಯರು ತಮ್ಮ ಐಹಿಕಸಂಪತ್ತಿನಲ್ಲಿ ಅವರಿಗೆ ಪಾಲು ನೀಡಲು ಕರ್ತವ್ಯಬದ್ಧರಾಗಿದ್ದಾರೆ.


ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ಪ್ರಭುವನ್ನೂ ಪರಮ ಪಿತನನ್ನೂ ಸ್ತುತಿಸುವುದು ಅದೇ ನಾಲಿಗೆಯೇ; ದೇವಸ್ವರೂಪದಲ್ಲಿ ಸೃಷ್ಟಿಸಲಾದ ಮಾನವನನ್ನು ಶಪಿಸುವುದೂ ಅದೇ ನಾಲಿಗೆಯೇ.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ಹೊಲಸು ಮಾತುಗಳು, ಬರಡು ನುಡಿಗಳು, ಕುಚೋದ್ಯ ಪದಗಳು ಯಾವುವೂ ನಿಮಗೆ ತರವಲ್ಲ. ಪ್ರತಿಯಾಗಿ, ದೇವರಿಗೆ ನೀವು ಕೃತಜ್ಞತಾಸ್ತುತಿಮಾಡಿರಿ.


ದೇವರು ಒಬ್ಬರೇ, ಸರ್ವರ ತಂದೆಯು ಅವರೇ; ಸರ್ವಶ್ರೇಷ್ಠರೂ ಅವರೇ; ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ.


ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ,


ಈಗ ಉತ್ತಮ ತಳಿಯ ಓಲಿವ್ ಮರದಿಂದ ಕೆಲವು ರೆಂಬೆಗಳನ್ನು ಕಡಿದುಹಾಕಿ ಆ ತಾವಿನಲ್ಲಿ ಕಾಡು ಓಲಿವ್ ಮರದ ರೆಂಬೆಯನ್ನು ಕಸಿಮಾಡಲಾಗಿದೆ. ಅನ್ಯಜನಾದ ನೀನು ಆ ಕಾಡುಮರದ ರೆಂಬೆಯಂತಿರುವೆ; ಕಸಿಮಾಡಿರುವುದರಿಂದ ರಸವತ್ತಾದ ಆ ಬೇರಿನಿಂದ ಈಗ ಪೋಷಣೆ ಪಡೆಯುತ್ತಿರುವೆ.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.


ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ I ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ I ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ II


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ದೇವಾಲಯವನ್ನು ಕಟ್ಟುವಾಗ, ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ, ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ, ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವೂ ಕೇಳಿಸಲಿಲ್ಲ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಇದರಲ್ಲಿ ಆಶ್ಚರ್ಯವೇನೂ ಇಲ್ಲ. ಸೈತಾನನೂ ಸಹ ಜ್ಯೋತಿರ್ಮಯ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು