Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:13 - ಕನ್ನಡ ಸತ್ಯವೇದವು C.L. Bible (BSI)

13 ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರು ನಮ್ಮನ್ನು ಅಂಧಕಾರದ ದೊರೆತನದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ರಾಜ್ಯದೊಳಗೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವಾನ್ ಅಮ್ಕಾ ಕಾಳ್ಕಾಚ್ಯಾ ಬಳಾಕ್ನಾ ಸುಟ್ಕಾ ಕರ್‍ಲಾ, ತೆನಿ ಅಮ್ಕಾ ಅಪ್ಲ್ಯಾ ಪ್ರೆಮಾಚ್ಯಾ ಲೆಕಾ ಜೆಜುಚ್ಯಾ ರಾಜಾತ್ ಮಿಳ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:13
40 ತಿಳಿವುಗಳ ಹೋಲಿಕೆ  

ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಆದರೂ ನಾನೀಗ ನಿಮಗೆ ಬರೆಯುತ್ತಿರುವುದು ಒಂದು ವಿಧದಲ್ಲಿ ಹೊಸ ಆಜ್ಞೆಯೇ ಸರಿ. ಅದರ ನೈಜಗುಣವು ಕ್ರಿಸ್ತಯೇಸುವಿನಲ್ಲಿ ಬೆಳಗಿದಂತೆ, ನಿಮ್ಮ ಜೀವನದಲ್ಲೂ ಬೆಳಗುತ್ತದೆ. ಏಕೆಂದರೆ, ಕತ್ತಲು ಕಳೆದುಹೋಗುತ್ತಿದೆ; ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ಇಗೋ ಜಗತ್ತನು ಮುತ್ತಿದೆ ಕತ್ತಲು ಜನಾಂಗಗಳನು ಆವರಿಸಿದೆ ಕಾರ್ಗತ್ತಲು. ನಿನ್ನ ಮೇಲಾದರೋ ಉದಯಿಸುವನು ಸರ್ವೇಶ್ವರನು ನಿನ್ನಲ್ಲಿ ಗೋಚರವಾಗುವುದು ಆತನಾ ತೇಜಸ್ಸು.


ಇದರಲ್ಲಿ ಆಶ್ಚರ್ಯವೇನೂ ಇಲ್ಲ. ಸೈತಾನನೂ ಸಹ ಜ್ಯೋತಿರ್ಮಯ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು