Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:14 - ಕನ್ನಡ ಸತ್ಯವೇದವು C.L. Bible (BSI)

14 ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಕುಮಾರನಲ್ಲಿ ನಮ್ಮ ಪಾಪಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮಗನು ನಮ್ಮ ಪಾಪಗಳಿಗೆ ಪರಿಹಾರ ನೀಡಿದನು. ಆತನಲ್ಲಿಯೇ ನಮ್ಮ ಪಾಪಗಳಿಗೆ ಕ್ಷಮೆ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆಚ್ಯಾಕ್ನಾ ಅಮ್ಕಾ ಸುಟ್ಕಾ ಗಾವ್ತಾ ಮಟ್ಲ್ಯಾರ್, ಪಾಪಾಕ್ನಾ ಮಾಪಿ ದಿವ್ನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:14
32 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಎಂದೇ, ಧರ್ಮಶಾಸ್ತ್ರದ ಪ್ರಕಾರ ಹೆಚ್ಚುಕಡಿಮೆ ಎಲ್ಲವೂ ರಕ್ತದಿಂದಲೇ ಶುದ್ಧೀಕರಣ ಹೊಂದುತ್ತವೆ. ರಕ್ತಧಾರೆ ಇಲ್ಲದೆ ಪಾಪಪರಿಹಾರವಿಲ್ಲ.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II


ಬರೆಯುತಿಹೆನು ಪ್ರಿಯಮಕ್ಕಳಿರಾ, ಇದನ್ನು ಏಕೆನೆ, ಕ್ರಿಸ್ತನಾಮದ ನಿಮಿತ್ತ ಕ್ಷಮಿಸಲಾಯಿತು ನಿಮ್ಮ ಪಾಪಗಳನ್ನು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ಯೇಸು ಅವರ ವಿಶ್ವಾಸವನ್ನು ಮೆಚ್ಚಿ, “ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು