Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:17 - ಕನ್ನಡ ಸತ್ಯವೇದವು C.L. Bible (BSI)

17 ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಎಲ್ಲಕ್ಕೂ ಮೊದಲು ಇದ್ದವನು; ಆತನು ಸಮಸ್ತಕ್ಕೂ ಆಧಾರ ಭೂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವುಗಳಿಗಿಂತ ಮೊದಲೇ ಕ್ರಿಸ್ತನಿದ್ದನು. ಸಮಸ್ತಕ್ಕೂ ಆತನೇ ಆಧಾರಭೂತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕ್ರಿಸ್ತ ಯೇಸು ಎಲ್ಲದಕ್ಕೂ ಮೊದಲು ಇದ್ದವರು, ಇವರಲ್ಲಿಯೇ ಸಮಸ್ತವೂ ನೆಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಚ್ಯಾ ಸಗ್ಳ್ಯಾನ್ ಅದ್ದಿಚ್ ಕ್ರಿಸ್ತ್ ಹೊತ್ತೊ ಸಗ್ಳ್ಯಾಕ್ನಿ ತೊಚ್ ಆಧಾರ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:17
19 ತಿಳಿವುಗಳ ಹೋಲಿಕೆ  

ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.


“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಇಳೆಯು ಭೂನಿವಾಸಿಗಳ ಸಮೇತ ತಳಮಳಗೊಳ್ಳಲು I ಅದರ ತಳಹದಿಯ ಬಿಗಿಹಿಡಿದಿರುವವನು ನಾನಿಲ್ಲದಿನ್ನಾರು? II


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


“ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು