Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:18 - ಕನ್ನಡ ಸತ್ಯವೇದವು C.L. Bible (BSI)

18 ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಭೆಯೆಂಬ ದೇಹಕ್ಕೆ ಆತನು ಶಿರಸ್ಸು; ಆತನು ಆದಿಸಂಭೂತನು. ಎಲ್ಲಾದರಲ್ಲಿ ಪ್ರಮುಖನಾಗುವಂತೆ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ. ಪ್ರತಿಯೊಂದೂ ಆತನಿಂದಲೇ ಬರುತ್ತದೆ. ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ. ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕ್ರಿಸ್ತ್ ತಾಂಡೊ ಮನ್ತಲ್ಯಾ ಆಂಗಾಕ್ ಟಕ್ಲೆ ಹೊವ್ನ್ ಹಾಯ್, ಹರಿ ಎಕ್ಬಿ ತೆಚ್ಯಾಕ್ನಾಚ್ ಯೆತಾ, ಮರ್ನಾತ್ನಾ ಅದ್ದಿ ಉಟುನ್ ಯೆಲ್ಲೊ ತೊಚ್, ತಸೆ ಹೊವ್ನ್ ಸಗ್ಳ್ಯಾಕ್ನಿ ತೊಚ್ ಅದ್ದಿಚೊ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:18
36 ತಿಳಿವುಗಳ ಹೋಲಿಕೆ  

ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I


ಒಂದು ವಿಷಯ ನಿಮಗೆ ತಿಳಿದಿರಲಿ. ಪ್ರತಿಯೊಬ್ಬ ವ್ಯಕ್ತಿಗೂ ಕ್ರಿಸ್ತಯೇಸುವೇ ಶಿರಸ್ಸು. ಪ್ರತಿಯೊಬ್ಬ ಸ್ತ್ರೀಗೂ ಪುರುಷನೇ ಶಿರಸ್ಸು. ಕ್ರಿಸ್ತೇಸುವಿಗೆ ದೇವರೇ ಶಿರಸ್ಸು.


‘ಅ'ಕಾರವೂ ‘ಳ'ಕಾರವೂ ನಾನೇ ಆದಿಯೂ ಸಮಾಪ್ತಿಯೂ ನಾನೇ'. “


ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ.


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು;


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ನನ್ನ ನಲ್ಲ, ತೇಜೋಮಯ, ರಕ್ತವರ್ಣ ಹತ್ತುಸಾವಿರ ಜನರಲ್ಲಿ ಶ್ರೇಷ್ಠ.


ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ.


ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು