Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:19 - ಕನ್ನಡ ಸತ್ಯವೇದವು C.L. Bible (BSI)

19 ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತಂದೆಯಾದ ದೇವರು ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ನೆಲಸಿರಬೇಕೆಂಬುದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್ ತೆಚ್ಯಾಕ್ಡೆ ಅಪ್ಲೆ ಸಗ್ಳೆ ಸಂಪುರ್ನ್ ಪಾನ್ ರ್‍ಹಾವ್ಚೆ ಮನುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:19
12 ತಿಳಿವುಗಳ ಹೋಲಿಕೆ  

ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ಇಳಿದು ಬಂದಿದ್ದಾತನೇ ಲೋಕಗಳಿಗೆಲ್ಲ ಮೇಲೇರಿಹೋಗಿದ್ದಾನೆ. ತನ್ನ ಪ್ರಸನ್ನತೆಯಿಂದ ಇಡೀ ಜಗತ್ತನ್ನೇ ಆವರಿಸಿದ್ದಾನೆ.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು