Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:2 - ಕನ್ನಡ ಸತ್ಯವೇದವು C.L. Bible (BSI)

2 ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿರುವ ನಂಬಿಗಸ್ತರಾದ ಸಹೋದರರಿಗೆ ಬರೆಯುವದೇನಂದರೆ - ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿ ನಂಬಿಗಸ್ತರಾದ ಮತ್ತು ಪವಿತ್ರರಾದ ಸಹೋದರ, ಸಹೋದರಿಯರಿಗೆ ನಾನು ಈ ಪತ್ರವನ್ನು ನಮ್ಮ ಸಹೋದರನಾದ ತಿಮೊಥೆಯನ ಜೊತೆಗೂಡಿ ಬರೆಯುತ್ತಿದ್ದೇನೆ. ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ: ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕೊಲೊಸ್ಸೆತ್ಲ್ಯಾ ಪವಿತ್ರ್ ದೆವಾಚ್ಯಾ ಲೊಕಾಕ್ನಿ ಮಟ್ಲ್ಯಾರ್, ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸಾನ್ ಹೊತ್ತ್ಯಾ ಅನಿ ಪವಿತ್ರ್ ಭಾವ್ ಭೆನಿಯಾಕ್ನಿ ಲಿವ್ತಲೆ ಕಾಯ್ ಮಟ್ಲ್ಯಾರ್. ದೆವ್ ಬಾಬಾ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:2
14 ತಿಳಿವುಗಳ ಹೋಲಿಕೆ  

ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ!


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ನಮ್ಮ ತಂದೆಯಾದ ದೇವರಿಂದಲೂ ಪ್ರಭು ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!


ಪ್ರಿಯ ಸಹೋದರ ತುಖಿಕನು ನನ್ನ ವಿಷಯವಾಗಿಯೂ ನನ್ನ ಕೆಲಸಕಾರ್ಯಗಳ ವಿಷಯವಾಗಿಯೂ ನಿಮಗೆ ತಿಳಿಸುವನು. ಆತ ಪ್ರಭುವಿನ ಪ್ರಾಮಾಣಿಕ ಸೇವಕ.


ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II


ದೇವರಿಂದ ಕರೆಹೊಂದಿರುವ ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಸಮೃದ್ಧಿಯಾಗಿ ಲಭಿಸಲಿ!


ಹೀಗಿರಲಾಗಿ, ವಿಶ್ವಾಸದಿಂದ ಬಾಳುವವರು ವಿಶ್ವಾಸಿಯಾದ ಅಬ್ರಹಾಮನು ಪಡೆದ ಸೌಭಾಗ್ಯವನ್ನೇ ಪಡೆಯುವರು.


ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.


ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು