Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:20 - ಕನ್ನಡ ಸತ್ಯವೇದವು C.L. Bible (BSI)

20 ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಆತನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ನಿಷ್ಕರ್ಷೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅನಿ ತೆನಿ ಕುರ್ಸಾರ್ ವೊತಲ್ಲ್ಯಾ ರಗ್ತಾ ವೈನಾ ಸಮಾದಾನ್ ಹಾನುನ್ ಸರ್‍ಗಾರ್ ಅನಿ ಜಮ್ನಿ ವರ್‍ತಿ ಹೊತ್ತೆ ಹರ್ ಎಕ್ಬಿ ತೆಚ್ಯಾ ವೈನಾ ರಾಜಿ ಕರುನ್ ಘೆವ್ಚೆ ಮನ್ತಲಿ ದೆವಾಚಿ ಇಚ್ಚಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:20
22 ತಿಳಿವುಗಳ ಹೋಲಿಕೆ  

ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.


ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಆದರೆ ದೋಷಪರಿಹಾರಕ ಬಲಿಪ್ರಾಣಿಗಳಲ್ಲಿ ಯಾವ ಪ್ರಾಣಿಯ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತರಲಾಗಿದೆಯೋ ಅದರ ಮಾಂಸವನ್ನು ತಿನ್ನಲೇಬಾರದು; ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.


ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಗಿದ್ಯೋನಿಯ ಮಗ ಅಬೀದಾನನು ಸಮರ್ಪಿಸಿದ ಕಾಣಿಕೆಗಳು.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು