Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:24 - ಕನ್ನಡ ಸತ್ಯವೇದವು C.L. Bible (BSI)

24 ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಿಯಾ ತುಮ್ಚ್ಯಾಸಾಟ್ನಿ ಸೊಸುನ್ ಘೆಟಲ್ಲ್ಯಾ ತರಾಸಾನಿ ಮಾಕಾ ಖುಶಿ ಹೊಲಾ, ಕ್ರಿಸ್ತ್ ತಾಂಡೊ ಮನ್ತಲ್ಯಾ ಅಪ್ಲ್ಯಾ ಆಂಗಾ ವೈನಾ ಅನಿ ಲೈ ತರಾಸಾ ಸೊಸುನ್ ಘೆವ್ನಗೆತುಚ್ ರ್‍ಹಾತಾ. ಹ್ಯಾ ತರಾಸಾತ್ನಿ ಮಿಯಾ ಸೊಸುನ್ ಘೆವ್ಚೆ ಹೊಲ್ಲೆ ಸಗ್ಳೆ, ತೆಚ್ಯಾ ಆಂಗಾ ಮಟ್ಲ್ಯಾರ್ ತಾಂಡ್ಯಾಸಾಟ್ನಿ ಸೊಸುನ್ ಘೆವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:24
21 ತಿಳಿವುಗಳ ಹೋಲಿಕೆ  

ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು,


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ನಿಮ್ಮಲ್ಲಿ ನನಗೆ ದೃಢವಾದ ಭರವಸೆಯುಂಟು. ಗಾಢವಾದ ಅಭಿಮಾನವುಂಟು. ನಮ್ಮೆಲ್ಲಾ ಸಂಕಟಗಳಲ್ಲೂ ನಾನು ಎದೆಗುಂದದೆ ಆನಂದಭರಿತನಾಗಿದ್ದೇನೆ.


ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.


ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ಆಗ ಯೇಸು, “ನಾನು ಕುಡಿಯುವ ಪಾತ್ರೆಯಿಂದ ನೀವೂ ಕುಡಿಯುವಿರಿ; ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು