ಕೊಲೊಸ್ಸೆಯವರಿಗೆ 1:25 - ಕನ್ನಡ ಸತ್ಯವೇದವು C.L. Bible (BSI)25 ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕೆಲಸವನ್ನು ನಿಮ್ಮ ಪ್ರಯೋಜನಕ್ಕೋಸ್ಕರ ನನಗೆ ದಯಪಾಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಾನು ಸಭೆಗೆ ಸೇವಕನಾದೆನು. ಏಕೆಂದರೆ ದೇವರು ನನಗೆ ವಿಶೇಷವಾದ ಕಾರ್ಯವನ್ನು ಮಾಡುವಂತೆ ಆಜ್ಞಾಪಿಸಿದನು. ಈ ಕಾರ್ಯವು ನಿಮಗೆ ಸಹಾಯ ಮಾಡುವುದು. ದೇವರ ಉಪದೇಶವನ್ನು ಸಂಪೂರ್ಣವಾಗಿ ತಿಳಿಸುವುದೇ ಆ ಕಾರ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಿಮಗೋಸ್ಕರವಾಗಿ ನನಗೆ ದೇವರು ಕೊಟ್ಟಿರುವ ಜವಾಬ್ದಾರಿಗೆ ಅನುಸಾರವಾಗಿ, ದೇವರ ವಾಕ್ಯವನ್ನು ಸಂಪೂರ್ಣವಾಗಿ ಸಾರಲು ನಾನು ಸಭೆಗೆ ಸೇವಕನಾದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ದೆವಾಚ್ಯಾ ಮನಾ ಸಾರ್ಕೆ ಅಮ್ಚ್ಯಾ ಫಾಯ್ದ್ಯಾಸಾಟ್ನಿ ಮಿಯಾ ತಾಂಡ್ಯಾಕ್ ಸೆವಕ್ ಹೊಲೊ, ಕಶ್ಯಾಕ್ ಮಟ್ಲ್ಯಾರ್, ದೆವಾನ್ ಅಪ್ಲಿ ಬರಿ ಖಬರ್ ಫುರಾ ಕಳ್ವುತಲೆ ಕಾಮ್ ಮಾಕಾ ದಿಲ್ಯಾನ್. ಅಧ್ಯಾಯವನ್ನು ನೋಡಿ |