Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:26 - ಕನ್ನಡ ಸತ್ಯವೇದವು C.L. Bible (BSI)

26 ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯಗಳನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು; ಈಗಿನ ಕಾಲದಲ್ಲಿ ದೇವಜನರಿಗೆ ತಿಳಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದಿಕಾಲದಿಂದಲೂ ಅಡಗಿಸಿಟ್ಟಿದ್ದ ರಹಸ್ಯಸತ್ಯವೇ ಈ ಉಪದೇಶ. ಈ ಸತ್ಯವನ್ನು ಎಲ್ಲಾ ಜನರಿಗೆ ಮರೆಮಾಡಲಾಗಿತ್ತು. ಈಗಲಾದರೋ ಈ ರಹಸ್ಯಸತ್ಯವನ್ನು ದೇವರ ಪವಿತ್ರ ಜನರಿಗೆ ತಿಳಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ರಹಸ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು. ಆದರೂ ಈಗ ಅದು ಕರ್ತ ಯೇಸುವಿನ ಜನರಿಗೆ ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅದ್ಲ್ಯಾ ಕಾಲಾಕ್ನಾಬಿ ನಿಪ್ವುನ್ ಥವಲ್ಲ್ಯಾ ಘುಟ್ಟಾಚೆ ಖರೆಚ್, ಹೆ ಖರೆ ಸಗ್ಳ್ಯಾ ಲೊಕಾಕ್ನಿ ನಿಪ್ವುನ್ ಥವಲ್ಲೆ ಹೊತ್ತೆ. ಅತ್ತಾ ಹೆ ಘುಟ್ಟಾನ್ ಹೊತ್ತೆ ಖರೆ ದೆವಾಚ್ಯಾ ಪವಿತ್ರ್ ಲೊಕಾಕ್ನಿ ಕಳ್ವುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:26
11 ತಿಳಿವುಗಳ ಹೋಲಿಕೆ  

ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.


ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.


ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.


ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು