Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:10 - ಕನ್ನಡ ಸತ್ಯವೇದವು C.L. Bible (BSI)

10 ಸಕಲ ಆಧಿಪತ್ಯಕ್ಕೂ ಅಧಿಕಾರಕ್ಕೂ ಶಿರಸ್ಸು ಅವರೇ. ಅವರಲ್ಲಿ ಮಾತ್ರ ನೀವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮತ್ತು ನೀವು ಆತನಲ್ಲಿದ್ದುಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮಿ ಸಗ್ಳೆಬಿ ಕ್ರಿಸ್ತಾಕ್ಡೆ ಸಂಪುರ್ನ್ ಹೊವ್ನ್ ಹಾಸಿ, ತುಮ್ಕಾ ದುಸ್ರೆ ಕಾಯ್ಬಿ ನಕ್ಕೊ. ಕ್ರಿಸ್ತ್ ಸಗ್ಳ್ಯಾ ರಾಜಾಕ್ನಿ ಅನಿ ಅಧಿಕಾರಿಕ್ನಿ ಟಕ್ಲೆ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:10
16 ತಿಳಿವುಗಳ ಹೋಲಿಕೆ  

ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಅಂತ್ಯ ಬರುವುದು ಅನಂತರವೇ. ಆಗ ಯೇಸು ಎಲ್ಲಾ ಆಧಿಪತ್ಯವನ್ನೂ ಅಧಿಕಾರವನ್ನೂ ಶಕ್ತಿಯನ್ನೂ ನಿರ್ಮೂಲಮಾಡಿ ತಂದೆಯಾದ ದೇವರಿಗೆ ಸಾಮ್ರಾಜ್ಯವನ್ನು ಒಪ್ಪಿಸಿಕೊಡುವರು.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು