Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:11 - ಕನ್ನಡ ಸತ್ಯವೇದವು C.L. Bible (BSI)

11 ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಎಲ್ಲಾ ದೊರೆತನಗಳಿಗೂ ಅಧಿಕಾರಿಗಳಿಗೂ ಶಿರಸ್ಸು. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದಿರಿ; ಈ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಇದು ಪಾಪಾಧೀನಸ್ವಭಾವವನ್ನು ವಿಸರ್ಜಿಸುವದೇ; ಇದೇ ಕ್ರಿಸ್ತೀಯ ಸುನ್ನತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕ್ರಿಸ್ತಾಕ್ಡೆ ತುಮಿ ದುಸ್ರಿ ಸುನ್ನತ್ ಘೆಟ್ಲ್ಯಾಶಿ. ತಿ ಸುನ್ನತ್ ಹಾತಿನ್ ಕರಲ್ಲಿ ನ್ಹಯ್; ಕ್ರಿಸ್ತಾನ್ ಕರಲ್ಲಿ ಸುನ್ನತ್ ಮಟ್ಲ್ಯಾರ್, ತುಮ್ಚ್ಯಾ ಪಾಪಾಚ್ಯಾ ಅದಿಕಾರಾತ್ನಾ ಸುಟ್ಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:11
22 ತಿಳಿವುಗಳ ಹೋಲಿಕೆ  

ಯಾರು ಅಂತರಂಗದಲ್ಲಿ ಯೆಹೂದ್ಯನಾಗಿರುತ್ತಾನೋ ಅವನೇ ನಿಜವಾದ ಯೆಹೂದ್ಯನು. ಅಂಥವನಿಗೆ ಅಂತರ್ಯದಲ್ಲಿ ಸುನ್ನತಿಯಾಗಿರುತ್ತದೆ. ಇದು ಲಿಖಿತ ಧರ್ಮಶಾಸ್ತ್ರದಿಂದ ಆದದ್ದಲ್ಲ, ದೇವರಾತ್ಮ ಅವರಿಂದ ಆದ ಕಾರ್ಯ; ಇಂಥವನು ಮೆಚ್ಚುಗೆಯನ್ನು ಪಡೆಯುವುದು ಮನುಷ್ಯನಿಂದಲ್ಲ, ದೇವರಿಂದ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.


ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.


ಆದುದರಿಂದ ಅವರ ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿ.


ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.


ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ.


ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ.


ಎಂಟನೆಯ ದಿನ ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಸಂದರ್ಭದಲ್ಲಿ ಅದಕ್ಕೆ ‘ಯೇಸು’ ಎಂಬ ಹೆಸರನ್ನಿಟ್ಟು ನಾಮಕರಣ ಮಾಡಿದರು. ಈ ಹೆಸರನ್ನು ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದನು.


ಅಯ್ಯೋ, ನಾನೆಂಥ ನಿರ್ಭಾಗ್ಯನು! ಸಾವಿನ ದವಡೆಗೆ ಸಿಕ್ಕಿರುವ ಈ ಶರೀರದಿಂದ ನನ್ನನ್ನು ಬಿಡಿಸುವವರು ಯಾರು?


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು