Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:12 - ಕನ್ನಡ ಸತ್ಯವೇದವು C.L. Bible (BSI)

12 ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತಯೇಸುವನ್ನು ಮೃತರ ಮಧ್ಯದಿಂದ ದೇವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟದ್ದರಿಂದಲೇ ಆ ಸುನ್ನತಿಯನ್ನು ಹೊಂದಿದಿರಿ. ಇದಲ್ಲದೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಸಾಮರ್ಥ್ಯದಲ್ಲಿ ನಂಬಿಕೆಯಿಡುವದರ ಮೂಲಕ ಅದರಲ್ಲಿ ಆತನ ಕೂಡ ಎದ್ದು ಬಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನೊಂದಿಗೆ ಹೂಳಲ್ಪಟ್ಟಿರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸುವುದರ ಮೂಲಕ ತೋರಿದ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಆ ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಮೇಲಕ್ಕೆ ಎದ್ದುಬಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತುಮಿ ಬಾಲ್ತಿಮ್ ಕರುನ್ ಘೆಟಲ್ಲ್ಯಾ ತನ್ನಾ; ಕ್ರಿಸ್ತಾಚ್ಯಾ ವಾಂಗ್ಡಾ ಮಾಟಿ ದಿವ್ನ್ ಹೊಲ್ಲೆ ಹಾಸಿ, ದೆವಾನ್ ಕ್ರಿಸ್ತಾಕ್ ಮರಲ್ಲ್ಯಾತ್ನಾ ಉಟ್ವುನ್, ದಾಕ್ವುನ್ ದಿಲ್ಲ್ಯಾ ತಾಕ್ತಿರ್ ವಿಶ್ವಾಸ್ ಥವ್ತಲ್ಯಾ ವೈನಾ, ತೆಚ್ಯಾ ವಾಂಗ್ಡಾ ವೈರ್ ಉಟ್ವುನ್ ಯೆಲ್ಲೆ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:12
31 ತಿಳಿವುಗಳ ಹೋಲಿಕೆ  

ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ.


ನಮ್ಮೆಲ್ಲರಿಗೂ ಪ್ರಭು ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.


ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.


ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.


ಅಂತೆಯೇ, ಪ್ರಿಯ ಸಹೋದರರೇ, ನೀವು ಕ್ರಿಸ್ತಯೇಸುವಿನ ದೇಹದೊಂದಿಗೆ ಒಂದಾಗಿರುವುದರಿಂದ ಧರ್ಮಶಾಸ್ತ್ರದ ಪಾಲಿಗೆ ಸತ್ತವರಾದಿರಿ. ಇದರ ಪರಿಣಾಮವಾಗಿ, ಮರಣದಿಂದ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವಿನೊಂದಿಗೆ ಬಂಧಿತರಾಗಿದ್ದೀರಿ. ಹೀಗೆ, ದೇವರಿಗೆ ನಾವು ಸತ್ಫಲವನ್ನು ಈಯುವವರಾಗಿದ್ದೇವೆ.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


“ಸ್ವಾಮೀ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.


ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು