Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:14 - ಕನ್ನಡ ಸತ್ಯವೇದವು C.L. Bible (BSI)

14 ಅವರು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದ್ದಾರೆ. ನಮ್ಮನ್ನು ಬಂಧಿಸಿದ್ದ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಕ್ರಿಸ್ತಯೇಸು ತೊಡೆದುಹಾಕಿದ್ದಲ್ಲದೆ ಅವುಗಳನ್ನು ಶಿಲುಬೆಗೆ ಜಡಿದು ನಮ್ಮನ್ನು ಬಿಡುಗಡೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ನಾವು ಅಪರಾಧಿಗಳಾಗಿದ್ದೆವು. ನಮ್ಮ ಮೇಲೆ ಹೊರಿಸಲಾದ ದೋಷಾರೋಪಣೆಯ ಪಟ್ಟಿಯಲ್ಲಿ ನಾವು ಉಲ್ಲಂಘಿಸಿದ ಆಜ್ಞೆಗಳನ್ನೆಲ್ಲ ಲಿಖಿತಗೊಳಿಸಲಾಗಿತ್ತು. ಆದರೆ ದೇವರು ನಮ್ಮ ಅಪರಾಧಗಳನ್ನೆಲ್ಲ ಕ್ಷಮಿಸಿ ಅವುಗಳನ್ನು ಶಿಲುಬೆಗೆ ಜಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಮಗೆ ವಿರೋಧವಾಗಿ ನಿಂತು ನಮ್ಮ ಮೇಲೆ ತಪ್ಪು ಹೊರಿಸುವಂತೆ ಬರೆಯಲಾಗಿದ್ದ ಶಾಸನಗಳನ್ನು ಕ್ರಿಸ್ತ ಯೇಸು ರದ್ದುಮಾಡಿದರು. ಅವುಗಳನ್ನು ಶಿಲುಬೆಯ ಮೇಲೆ ಜಡಿದು ಇಲ್ಲದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ವರ್‍ತಿ ಚುಕೆಚೊ ಅಪರಾದ್ ಘಾಟಲ್ಲ್ಯಾ ಹುಕುಮಾ ಸಾರ್ಕೆ ಹೊತ್ತ್ಯಾ ಚಿಟಿಕ್ ದೆವಾನ್ ಪುಸುನ್ ಟಾಕುನ್, ತೆಕಾ ಕುರ್ಸಾರ್ ಮಾರುನ್ ನಾ ಹೊಯ್ ಸಾರ್ಕೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:14
21 ತಿಳಿವುಗಳ ಹೋಲಿಕೆ  

ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಇಲ್ಲಿ ‘ಹೊಸ ಒಡಂಬಡಿಕೆ’ ಎಂದು ಹೇಳಿ, ಹಿಂದಿನದನ್ನು ಹಳೆಯದಾಗಿಸಿದ್ದಾರೆ. ಹಳತಾದುದು ಹಾಗೂ ಮುದಿಯಾದುದು ಅಳಿದುಹೋಗುವಂಥಾದ್ದು.


ಹಳೆಯ ಶಾಸನವು ಶಿಥಿಲವೂ ವಿಫಲವೂ ಆದಕಾರಣ, ಅದನ್ನು ರದ್ದುಗೊಳಿಸಲಾಯಿತು.


ನೀವು ಕ್ರಿಸ್ತಯೇಸುವಿನೊಡನೆ ಮೃತರಾಗಿರುವ ಕಾರಣ, ಪ್ರಾಕೃತ ಶಕ್ತಿಗಳ ಬಂಧನದಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿರುವಲ್ಲಿ, ಪ್ರಾಪಂಚಿಕ ವಿಧಿನಿಯಮಗಳಿಗೆ ಒಳಪಟ್ಟು ಬಾಳುತ್ತಿರುವುದೇಕೆ?


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


“ಬಳಿಕ ಯಾಜಕನು ಆ ಶಾಪವಚನಗಳನ್ನು ಒಂದು ಪತ್ರದಲ್ಲಿ ಬರೆದು ಆ ವಿಷಕರ ಜಲದಲ್ಲಿ ತೊಳೆಯಲಿ;


ಅಧರ್ಮವು ಈಗಾಗಲೇ ಗುಪ್ತವಾಗಿ ತನ್ನ ಕೆಲಸವನ್ನು ಸಾಧಿಸುತ್ತಿದೆ; ತಡೆಗಟ್ಟಿರುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.


ನನ್ನ ಪಾಪದೋಷಕೆ ವಿಮುಖನಾಗು I ಸರ್ವದ್ರೋಹಗಳನು ಅಳಿಸಿಹಾಕು II


ಮೊದಲನೇ ತಿಂಗಳ ಹದಿಮೂರನೆಯ ದಿನ ರಾಜಲೇಖಕರನ್ನು ಕರೆಸಲಾಯಿತು. ಇವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಾಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಅವರವರ ಸ್ವದೇಶಿ ಲಿಪಿಗಳಲ್ಲೂ ಭಾಷೆಗಳಲ್ಲೂ ಬರೆದರು. ಅರಸ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾದ ಈ ಪತ್ರಗಳು ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.


ಅವರ ಅಪರಾಧವನ್ನು ಕ್ಷಮಿಸಬೇಡಿ. ನಿಮ್ಮೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡಿ. ಏಕೆಂದರೆ ಕಟ್ಟುವವರ ಮುಂದೆಯೇ ಅವರು ನಿಮ್ಮನ್ನು ಕೆಣಕಿದ್ದಾರೆ,” ಎಂದು ನಾನು ಪ್ರಾರ್ಥಿಸಿದೆ.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಅರಸನ ಹೆಸರಿನಲ್ಲಿ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ರದ್ದುಮಾಡಲಾಗದು. ಆದ್ದರಿಂದ ಯೆಹೂದ್ಯರ ವಿಷಯದಲ್ಲಿ ನಿಮಗೆ ಸರಿತೋರಿದಂತೆ ಅರಸನ ಹೆಸರಿನಲ್ಲಿ ನೀವೂ ಪತ್ರ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು