Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:18 - ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಉಲ್ಲಿ ಲೊಕಾ ದೆವ್ ದುತಾಕ್ನಿ ಪುಜಾ ಕರ್‍ತಲೆ ಅನಿ ಲೈ ಶಾಂತ್ಪಾನಾಚೆ ಸಾರ್ಕೆ ನಾಟಕ್ ಕರುನ್ ದಾಕ್ವುತಲ್ಯಾತ್ ಬುಡುನ್ ಹಾತ್. ತಿ ಲೊಕಾ ಅಪ್ನಾಕ್ ದಿಸಲ್ಲ್ಯಾ ದರ್ಶನಾಚ್ಯಾ ವಿಶಯಾತ್ ಕನ್ನಾಬಿ ಬೊಲಿತ್ ರಾತಾನಾ “ತುಮಿ ಅಸ್ಲಿ ಕಾಮಾ ಕರ್‍ತಲ್ಯಾಸಾಟ್ನಿ ಚುಕಿದಾರ್ ಹೊಲ್ಯಾಸಿ” ಮನುನ್ ಲೊಕಾನಿ ತುಮ್ಚ್ಯಾ ವಿಶಯಾತ್ ಸಾಂಗುಕ್ ದಿವ್ನಕಾಸಿ. ತೆಂಚಿ ಜಗಾಚಿ ಯವ್ಜನ್ ತೆಂಕಾ ಕಾರನ್ ಸಾಂಗ್ತಾನಾ ಬಡಾಯಿನ್ ಫುಗಿ ಸಾರ್ಕೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:18
42 ತಿಳಿವುಗಳ ಹೋಲಿಕೆ  

ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


ತಮ್ಮ ಮಾತಿನ ಅರ್ಥವಾಗಲಿ, ತಮ್ಮ ವಾದದ ತಿರುಳಾಗಲಿ ಅವರಿಗೆ ತಿಳಿಯದಿದ್ದರೂ ಅವರು ಧರ್ಮೋಪದೇಶಕರಾಗಲು ಹವಣಿಸುತ್ತಾರೆ.


ಸ್ವಕಲ್ಪಿತ ಆಚಾರವಿಧಿಗಳಿಂದಲೂ ಕಪಟ ವಿನಯದಿಂದಲೂ ಕಠಿಣ ದೇಹದಂಡನೆಯಿಂದಲೂ ಕೂಡಿರುವ ಈ ವಿಧಿನಿಯಮಗಳು ಹೊರನೋಟಕ್ಕೆ ಜಾಣ್ಮೆಯುಳ್ಳದಾಗಿ ಕಾಣಬಹುದು. ಆದರೂ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಇವುಗಳು ಪ್ರಯೋಜನಕ್ಕೆ ಬರುವಂಥವುಗಳಲ್ಲ.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಅವರು ದೇವರ ಸತ್ಯವನ್ನು ಬಿಟ್ಟು ಅಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ನೇ ಆರಾಧಿಸಿ, ಸೇವೆಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು. ಆಮೆನ್.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ.


ಮೇಲಣ ಬಹುಮಾನವನ್ನು ಪಡೆಯಲೆಂದು ದೇವರು ನನಗೆ ಕ್ರಿಸ್ತಯೇಸುವಿನ ಮುಖಾಂತರ ಕರೆ ನೀಡಿದ್ದಾರೆ. ಆ ಗುರಿಯನ್ನು ತಲುಪಲೆಂದೇ ನಾನು ಮುಂದೋಡುತ್ತಲಿದ್ದೇನೆ.


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.


ಕುಲದೇವರಿಗೆ ಬದಲಾಗಿ ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.


‘ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖಪ್ರವಾದಿಗಳಿಗೆ ಧಿಕ್ಕಾರ!


ಅವರು ಪೆಗೋರದಲ್ಲಿ ನಡೆದ ಘಟನೆಗಳಲ್ಲೂ ತಮ್ಮ ನಾಯಕನ ಮಗಳಾದ ಕೊಜ್ಜೀ ಎಂಬ ಸ್ವಕುಲಸ್ತ್ರೀಯ ವಿಷಯದಲ್ಲೂ ನಿಮ್ಮನ್ನು ಮೋಸಗೊಳಿಸಿದ್ದಾರೆ. ನಿಮಗೆ ಕೇಡುಮಾಡಿದ್ದಾರೆ,” ಎಂದರು. ಆ ಮಹಿಳೆ ಹತಳಾದುದು ಪೆಗೋರದ ಘಟನೆಗಳ ನಿಮಿತ್ತ ದೊಡ್ಡ ರೋಗ ಬಂದಾಗ.


ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಯಾರೂ ತಮ್ಮ ಕುತರ್ಕಗಳಿಂದ ನಿಮ್ಮನ್ನು ಮೋಸಗೊಳಿಸದಿರಲಿ.


ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.


ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ.


ಇನ್ನು ನಾನು ನಿಮ್ಮ ಬಳಿಗೆ ಬರುವುದಿಲ್ಲ ಎಂದು ಭಾವಿಸಿ ಕೆಲವರು ಅಹಂಕಾರಿಗಳಾಗಿ ಮೆರೆಯುತ್ತಿದ್ದಾರೆಂದು ತಿಳಿದುಬಂದಿದೆ.


ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಬೇಕಾದಷ್ಟು ಪರಿಮಳ ದ್ರವ್ಯವನ್ನು ಕೂಡಿಸಿಕೊಂಡು, ಸುಗಂಧ ತೈಲವನ್ನು ತೆಗೆದುಕೊಂಡು ‘ಮೋಲೆಕ್’ ದೇವತೆಯ ಬಳಿಗೆ ಯಾತ್ರೆಗೈದಿರುವೆ. (ಹೊಸ ದೇವತೆಗಳನ್ನು ಹುಡುಕಲು) ನಿನ್ನ ದೂತರನ್ನು ದೂರದೂರ ನಾಡುಗಳಿಗೆ ಕಳಿಸಿರುವೆ. ಪಾತಾಳದವರೆಗೂ ನಿನ್ನನ್ನು ತಗ್ಗಿಸಿಕೊಂಡಿರುವೆ.


“ಅಜ್ಞಾನದ ಮಾತುಗಳನ್ನಾಡಿ ಸತ್ಯಾಲೋಚನೆಯನು ಮಂಕುಮಾಡುವ ನೀನಾರು?


“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು