Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:2 - ಕನ್ನಡ ಸತ್ಯವೇದವು C.L. Bible (BSI)

2 ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶೆ ಮಟ್ಲ್ಯಾರ್, ತೆನಿ ಸಗ್ಳೆ ಭುತ್ತುರ್‍ಲ್ಯಾ ಮನಾತ್ ಉಮ್ಮೆದಿನ್ ಭುರುನ್ ಪ್ರೆಮಾನ್ ಎಕ್ ಹೊವ್ಚೆ ಅನಿ ಖರ್ಯಾ ಸಮ್ಜನಿಕ್ನಾ ಯೆತಲ್ಯಾ ಘಟ್ಟ್ ವಿಶ್ವಾಸಾತ್ ಸಾವ್ಕಾರ್ ಹೊವ್ಚೆ ಮನುನ್ ಆಶಾ ಕರ್‍ತಾ, ಮಟ್ಲ್ಯಾರ್, ದೆವಾಚೆ ಮೊಟೆ ಖರೆ ತೆನಿ ಫುರಾ ಕಳ್ವುನ್ ಘೆವ್ಚೆ; ಕ್ರಿಸ್ತುಚ್ ತೆ ಖರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:2
58 ತಿಳಿವುಗಳ ಹೋಲಿಕೆ  

ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ನನ್ನ ವಿಷಯದಲ್ಲಿ ನಿಮಗೆ ಎಲ್ಲವನ್ನೂ ತಿಳಿಸಿ, ನಿಮ್ಮನ್ನು ಹುರಿದುಂಬಿಸಿ, ಪ್ರೋತ್ಸಾಹಿಸುವುದಕ್ಕಾಗಿ ಆತನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.


ನಮ್ಮ ಸಮಾಚಾರವನ್ನು ನಿಮಗೆ ತಿಳಿಸಲೆಂದು ಹಾಗೂ ನಿಮ್ಮನ್ನು ಉತ್ತೇಜಿಸಲೆಂದು ಆತನನ್ನು ನಿಮ್ಮಲ್ಲಿಗೆ ಕಳುಹಿಸಿದ್ದೇನೆ.


ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನೀವು ಹೊಂದಿರುವ ನಿರೀಕ್ಷೆ ಪೂರ್ಣವಾಗಿ ಕೈಗೂಡುವಂತೆ ನಿಮ್ಮಲ್ಲಿ ಪ್ರತಿಯೊಬ್ಬನೂ ಮೊದಲಿನ ಆಸಕ್ತಿಯನ್ನು ಕಡೆಯತನಕವೂ ತೋರಿಸಬೇಕೆಂದು ಹಾರೈಸುತ್ತೇನೆ.


ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಪಿತನಿಗೆ ಇರುವುದೆಲ್ಲವೂ ನನ್ನದೇ. ಆದುದರಿಂದಲೇ ಪವಿತ್ರಾತ್ಮ ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸುವರೆಂದು ನಾನು ಹೇಳಿದ್ದು.


ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ನಿಮ್ಮ ದೇವರು ಇಂತೆನ್ನುತ್ತಾರೆ : “ಸಂತೈಸಿ, ನನ್ನ ಜನರನ್ನು ಸಂತೈಸಿರಿ.


ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II


ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ.


ಹೀಗೆ ನಾವು ಸತ್ಯಕ್ಕೆ ಸೇರಿದವರು ಎಂಬುದು ಮನದಟ್ಟಾಗುವುದಲ್ಲದೆ ದೇವರ ಮುಂದೆ ನಮ್ಮ ಮನಸ್ಸು ನೆಮ್ಮದಿಯಿಂದಿರುತ್ತದೆ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳ ವರದಿಯನ್ನು ಬರೆದಿಡಲು ಹಲವರು ಪ್ರಯತ್ನಿಸಿದ್ದಾರೆ.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ನೀವು, ಒಬ್ಬರಾದ ಮೇಲೆ ಒಬ್ಬರು ದೇವರ ವಾಕ್ಯವನ್ನು ಬೋಧಿಸಬಹುದು. ಆಗ ಎಲ್ಲರೂ ಕಲಿತುಕೊಂಡು ಪ್ರೋತ್ಸಾಹಪಡೆಯಲು ಸಾಧ್ಯವಾಗುತ್ತದೆ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯಗಳನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ.


ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.


ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು