Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:22 - ಕನ್ನಡ ಸತ್ಯವೇದವು C.L. Bible (BSI)

22 ಇವುಗಳೆಲ್ಲವೂ ಬಳಕೆಯಿಂದ ಅಳಿದುಹೋಗುತ್ತವೆ. ಅಲ್ಲದೆ, ಅವೆಲ್ಲವೂ ಮಾನವ ವ್ಯವಸ್ಥಿತ ಬೋಧನೆ ಹಾಗೂ ನಿಬಂಧನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದನ್ನು ಮುಟ್ಟಬೇಡ ಎನ್ನುವ ನಿಬಂಧನೆಗಳಿಗೆ ನಿಮ್ಮನ್ನು ಒಳಗಾಗಮಾಡಿಕೊಳ್ಳುವದೇಕೆ? ಆ ಪದಾರ್ಥಗಳೆಲ್ಲವೂ ಬಳಸುವದರಲ್ಲಿ ನಾಶವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪ್ರಾಪಂಚಿಕ ವಿಷಯಗಳ ಕುರಿತಾದ ಈ ನಿಯಮಗಳೆಲ್ಲ ಬಳಸಿದ ಮೇಲೆ ನಾಶವಾಗುತ್ತವೆ. ಅವುಗಳು ಜನರ ಆಜ್ಞೆ ಮತ್ತು ಜನರ ಉಪದೇಶಗಳೇ ಹೊರತು ದೇವರವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈ ಶಾಸನಗಳು ಮಾನವ ಆಜ್ಞೆಗಳ ಹಾಗೂ ಬೋಧನೆಗಳ ಅನುಸಾರವಾಗಿ ಬಳಕೆಯಿಂದ ಅಳಿದುಹೋಗುತ್ತವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜಗಾಚ್ಯಾ ವಿಶಯಾಂಚಿ ನೆಮಾ ಸಗ್ಳಿ ವಾಪ್ರುನ್ ಹೊಲ್ಲ್ಯಾ ಮಾನಾ, ನಾಸ್ ಹೊವ್ನ್ ಜಾತಾತ್ ತಿ ಸಗ್ಳಿ ಮಾನ್ಸಾಂಚಿ ನೆಮಾ ಅನಿ ಶಿಕಾಪಾ, ದೆವಾಚಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:22
12 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಆದ್ದರಿಂದ ಯೆಹೂದ್ಯರ ಕಟ್ಟುಕತೆಗಳಿಗೂ ಸತ್ಯಭ್ರಷ್ಟರಾದವರ ವಿಧಿಗಳಿಗೂ ಕಿವಿಗೊಡದಂತೆ ತೀವ್ರವಾಗಿ ಖಂಡಿಸಿ, ವಿಶ್ವಾಸದಲ್ಲಿ ದೃಢವಾಗಿರುವಂತೆ ಭಕ್ತಾದಿಗಳಿಗೆ ಬೋಧಿಸು.


“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಅವನು ತನ್ನ ಪೂರ್ವಜರ ದೇವರನ್ನಾಗಲಿ, ಮಹಿಳೆಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನೇ ಆಗಲಿ, ಲಕ್ಷಿಸನು. ಎಲ್ಲ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.


ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.”


‘ಇದನ್ನು ಮುಟ್ಟಬೇಡ,’ ‘ಅದನ್ನು ಸವಿಯಬೇಡ,’ ‘ಇನ್ನೊಂದನ್ನು ಬಳಸಬೇಡ', ಎಂಬ ಕಟ್ಟಳೆಗಳಿಗೇಕೆ ಒಳಗಾಗುತ್ತೀರಿ?


ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು