Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:3 - ಕನ್ನಡ ಸತ್ಯವೇದವು C.L. Bible (BSI)

3 ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕ್ರಿಸ್ತನಲ್ಲಿ ಸರ್ವಜ್ಞಾನವು ಮತ್ತು ತಿಳುವಳಿಕೆಯು ಬಚ್ಚಿಟ್ಟಿರುವ ನಿಕ್ಷೇಪಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕ್ರಿಸ್ತಾಕ್ಡೆ ಸಗ್ಳೆ ಶಾನೆಪಾನ್ ಅನಿ ಸಾವ್ಕಾರ್ಕಿ ನಿಪ್ಪುನ್ ಥವಲ್ಲಿ ಹಾಯ್, ತೊಚ್ ನಿಪ್ಪುನ್ ಥವಲ್ಲೆ ಕಾಡುಕ್ ಚಾವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:3
21 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.


“ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಅದು ಎಲ್ಲ ಜೀವಿಗಳ ಕಣ್ಣಿಗೆ ಅಗೋಚರ ಆಕಾಶದ ಪಕ್ಷಿಗಳಿಗೂ ಅದು ಅಪರಿಚಿತ.


ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.


ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಜ್ಞಾನೋದಯ ನೀಡಿದವನಾರು ಆತನಿಗೆ? ನ್ಯಾಯಮಾರ್ಗ ತೋರಿಸಿದವನಾರು ಆತನಿಗೆ? ಬುದ್ಧಿ ಕಲಿಸಿದವನಾರು ಆತನಿಗೆ? ಏನೇ ಮಾರ್ಗವನ್ನು ಸೂಚಿಸಿದವನಾರು ಆತನಿಗೆ?


ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು, ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು