Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:9 - ಕನ್ನಡ ಸತ್ಯವೇದವು C.L. Bible (BSI)

9 ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕ್ರಿಸ್ತನಲ್ಲಿಯೇ ದೇವರ ಸರ್ವಸಂಪೂರ್ಣತೆಯು ಅವತರಿಸಿ ವಾಸಮಾಡುತ್ತದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾಚೆ ಸಗ್ಳೆ ಸಂಪುರ್ನಪಾನ್ ಕ್ರಿಸ್ತಾಕ್ಡೆ ಹಾಯ್, ಕ್ರಿಸ್ತ್ ಹ್ಯಾ ಜಗಾತ್ ರ್‍ಹಾತಾನಾಬಿ ತೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:9
20 ತಿಳಿವುಗಳ ಹೋಲಿಕೆ  

ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.


ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ.


ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


“ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು.


ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು