ಕೊಲೊಸ್ಸೆಯವರಿಗೆ 3:12 - ಕನ್ನಡ ಸತ್ಯವೇದವು C.L. Bible (BSI)12 ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗಿರಲಾಗಿ ನೀವು ದೇವರಿಂದ ಆರಿಸಿಕೊಂಡವರೂ ಪ್ರತಿಷ್ಠಿತರೂ ಪ್ರಿಯರೂ ಆಗಿರುವದರಿಂದ ಕನಿಕರ ದಯೆ ದೀನಭಾವ ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ದೆವಾನ್ ತುಮ್ಕಾ ಅಪ್ನಾಚ್ಯಾ ಸ್ವತಾಕ್ ಮನುನ್ ಎಚುನ್ ಘೆಟ್ಲಾ, ಅನಿ ತುಮ್ಕಾ ಅಪ್ಲಿ ಪವಿತ್ರ್ ಲೊಕಾ ಕರ್‍ಲಾ. ತೊ ತುಮ್ಚೊ ಪ್ರೆಮ್ ಕರ್‍ತಾ. ಅಶೆ ರಾತಾನಾ ಕಾಳ್ಜಿ, ದಯಾ, ಖಾಲ್ತಿ ಹೊವ್ನ್ ಚಲ್ತಲೆ, ಥಂಡಪಾನ್, ಸೊಸುನ್ ಘೆತಲೊ ಮನ್, ಹ್ಯಾ ಸಗ್ಳ್ಯಾ ಬರ್‍ಯಾ ಗುನಾನಿ ತುಮ್ಕಾ ತುಮಿ ಭರುನ್ ಘೆವಾ. ಅಧ್ಯಾಯವನ್ನು ನೋಡಿ |
ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.