Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:16 - ಕನ್ನಡ ಸತ್ಯವೇದವು C.L. Bible (BSI)

16 ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕ್ರಿಸ್ತಾಚೆ ಶಿಕಾಪ್ ತುಮ್ಚ್ಯಾ ಭುತ್ತುರ್ಲ್ಲ್ಯಾ ಮನಾತ್ ಲೈ ಘಟ್ಟ್ ಹೊವ್ನ್ ರ್‍ಹಾಂವ್ದಿತ್, ತುಮಿ ದೆವಾಕ್ನಾ ಶಿಕಲೆ ಶಿಕ್ವುಕ್ ಅನಿ ಎಕಾಮೆಕಾಕ್ ಬುದ್ದ್ ಸಾಂಗುಕ್ ವಾಪ್ರಾ, ತುಮ್ಚ್ಯಾ ಮನಾತ್ ದೆವಾಕ್ ಧನ್ಯವಾದ್ ದಿವ್ನ್, ಗಿತ್ ಸಾಂಗ್ತಲೆ ಅನಿ ಕಿರ್ತನ್ ಸಾಂಗ್ತಲೆ ಅನಿ ಆತ್ಮಿಕ್ ಗಿತಾ ಸಾಂಗ್ತಲೆ ಹೊವ್ನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:16
62 ತಿಳಿವುಗಳ ಹೋಲಿಕೆ  

ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ.


ಮೊದಲಿನಿಂದಲೂ ನೀವು ಯಾವ ಸಂದೇಶವನ್ನು ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಸಲಿ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ನೆಲೆಸುತ್ತೀರಿ.


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.


ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II


ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II


ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕ್ರಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ.


ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II


ಗಾಯನಮಂಡಲಿಗಳು ಕೃತಜ್ಞತಾ ಸ್ತುತಿಕೀರ್ತನೆಗಳ ದೇವಸೇವೆಯೂ ಪೂರ್ವಕಾಲದಲ್ಲಿ ಅಂದರೆ, ದಾವೀದನ ಮತ್ತು ಆಸಾಫನ ಕಾಲದಲ್ಲೇ ಇದ್ದವು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು‍ ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಆದರೂ ಅವನನ್ನು ಶತ್ರುವೆಂದು ಭಾವಿಸದೆ, ಸಹೋದರನಂತೆ ಕಂಡು, ಬುದ್ಧಿಹೇಳಿರಿ.


ಆದ್ದರಿಂದ, ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿ.


ಹಾಗಾದರೆ ಈಗ ನಾನೇನು ಮಾಡಬೇಕು? ಆತ್ಮದಿಂದಲೂ ಪ್ರಾರ್ಥಿಸಬೇಕು, ಮನಸ್ಸಿನಿಂದಲೂ ಪ್ರಾರ್ಥಿಸಬೇಕು, ಆತ್ಮದಿಂದಲೂ


ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಹೃದಯಪೂರ್ವಕ ವಂದನೆ ಪ್ರಭು ನಿನಗೆ I ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II


ನನ್ನೀ ಬಾಳ ಪ್ರವಾಸ ಮಂದಿರದೊಳು I ಗಾನವಾದುವು ನಿನ್ನಾನಿಬಂಧನೆಗಳು II


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ಇವರೂ ಸರ್ವೇಶ್ವರನ ಕೀರ್ತನೆಗಳನ್ನು ಕಲಿತ ಇವರ ಸಹೋದರರೂ ಒಟ್ಟು ಇನ್ನೂರ ಎಂಬತ್ತೆಂಟು ಮಂದಿ ಗಾಯನಪ್ರವೀಣರು ಇದ್ದರು.


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ಹಾಡುವೆ ನಾನೆನ್ನ ಪ್ರಿಯನಿಗೆ ಗೀತೆಯೊಂದನು ಅವನ ದ್ರಾಕ್ಷಾವನದ ಕುರಿತು ಪ್ರೇಮಗೀತೆಯನು : ಪ್ರಿಯತಮನಿಗೆ ಇತ್ತೊಂದು ದ್ರಾಕ್ಷಿಯ ತೋಟ ಫಲವತ್ತಾಗಿಹ ಗುಡ್ಡದ ಮೇಲಿನ ತೋಟ. ಆರಿಸಿ ಎಸೆದನು ಕಲ್ಲುಮುಳ್ಳುಗಳನು ಅಗೆದು ಹದಮಾಡಿದನಾತ ಗುಡ್ಡವನು.


ಸೊಲೊಮೋನನ ಪರಮಗೀತೆ : ನಲ್ಲೆ :


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.


ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು