Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:17 - ಕನ್ನಡ ಸತ್ಯವೇದವು C.L. Bible (BSI)

17 ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತುಮಿ ಬೊಲ್ತಲೆ, ಚಲ್ತಲೆ, ಕಾಯ್ ಕರ್ಲ್ಯಾಬಿ, ತೆ ಸಗ್ಳೆ ತುಮ್ಚ್ಯಾ ಧನಿಯಾ ಜೆಜುಸಾಟ್ನಿ ಕರಾ, ತುಮಿ ಕಾಯ್ ಕರ್ಲ್ಯಾಬಿ, ಜೆಜುಚ್ಯಾ ವೈನಾ ದೆವಾ ಬಾಬಾಕ್ ಧನ್ಯಾವಾದ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:17
29 ತಿಳಿವುಗಳ ಹೋಲಿಕೆ  

ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ನೀವು ಏನನ್ನು ಮಾಡಿದರೂ ಪೂರ್ಣಮನಸ್ಸಿನಿಂದ ಮಾಡಿ; ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಪ್ರಭುವನ್ನು ಮೆಚ್ಚಿಸುವುದಕ್ಕಾಗಿ ಮಾಡಿ.


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರೂ ಅನ್ಯಧರ್ಮೀಯರೂ ಈ ವಿಷಯವನ್ನು ಕೇಳಿ ಭಯಭೀತರಾದರು. ಪ್ರಭು ಯೇಸುವಿನ ನಾಮವನ್ನು ಸಂಕೀರ್ತಿಸಿದರು.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ಮೊಟ್ಟಮೊದಲನೆಯದಾಗಿ, ನಿಮ್ಮೆಲ್ಲರ ಪರವಾಗಿ ಯೇಸುಕ್ರಿಸ್ತರ ಮುಖಾಂತರ ನಾನು ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ನಿಮ್ಮ ವಿಶ್ವಾಸ ಹಾಗು ವಿಧೇಯತೆ ಇಡೀ ಜಗತ್ತಿನಲ್ಲಿ ಪ್ರಖ್ಯಾತವಾಗಿದೆ.


ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?


ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಸರ್ವೇಶ್ವರನ ಹೆಸರಿಗಾಗಿ ಒಂದು ಪೀಠವನ್ನು ಕಟ್ಟಿಸಿದನು. ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗಿಸಿ ಕಾಲುವೆ ಮಾಡಿಸಿದನು.


ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು