Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:5 - ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆ ಹೊವ್ನ್, ತುಮ್ಚ್ಯಾಕ್ಡೆ ಹೊತ್ತಿ ಬುರ್ಶಿ ಕಾಮಾ, ಲೈಂಗಿಕ್ ಪಾಪ್, ಬುರ್ಶಿ ಕಾಮಾ, ಸಂಬೊಗ್ ಕರ್ತಲಿ ಆಶಾ, ಬುರ್ಶಿ ಆಶಾ, ಮುರ್ತಿಯಾಂಚ್ಯಾ ಫುಜೆಕ್ ಸಮಾ ಹೊವ್ನ್ ಹೊತ್ತ್ಯಾ ಬುರ್ಶಾ ಆಶೆಕ್ ಮರುನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:5
34 ತಿಳಿವುಗಳ ಹೋಲಿಕೆ  

ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ.


ಲಜ್ಜೆಗೆಟ್ಟವರಾಗಿ ದುರಿಚ್ಛೆಗಳಿಗೆ ಮಾರುಹೋಗಿದ್ದಾರೆ; ಅಶುದ್ಧ ಕಾರ್ಯಗಳಲ್ಲೇ ನಿರತರಾಗಿದ್ದಾರೆ.


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ನನ್ನ ಇಂದ್ರಿಯಗಳಲ್ಲಿಯಾದರೋ ಬೇರೊಂದು ನಿಯಮವನ್ನು ಕಾಣುತ್ತೇನೆ. ಇದು ನನ್ನ ಅಂತರಂಗ ನಿಯಮಕ್ಕೆ ತದ್ವಿರುದ್ಧವಾಗಿ ಕಾದಾಡುತ್ತದೆ; ನನ್ನ ಇಂದ್ರಿಯಗಳಲ್ಲಿ ನೆಲೆಗೊಂಡಿರುವ ಪಾಪನಿಯಮಕ್ಕೆ ನನ್ನನ್ನು ಕೈದಿಯನ್ನಾಗಿಸುತ್ತದೆ.


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ?


“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.


ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.


ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.


ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.


ನಾವು ಶರೀರ ಸ್ವಭಾವಕ್ಕನುಸಾರವಾಗಿ ಬಾಳುತ್ತಿದ್ದಾಗ ಪಾಪಕರವಾದ ದುರಿಚ್ಛೆಗಳು ಧರ್ಮಶಾಸ್ತ್ರದಿಂದಲೇ ಪ್ರಚೋದಿತವಾಗಿ ನಮ್ಮ ಇಂದ್ರಿಯಗಳಲ್ಲಿ ಕಾರ್ಯನಿರತವಾಗಿದ್ದವು. ಪರಿಣಾಮವಾಗಿ, ನಾವು ಮೃತ್ಯುವಿಗೆ ಫಲವನ್ನು ಈಯುತ್ತಿದ್ದೆವು.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ಮಾನವರು ಈ ರೀತಿ ವರ್ತಿಸಿದ್ದರಿಂದಲೇ ದೇವರು ಅವರನ್ನು ತುಚ್ಛವಾದ ಕಾಮಾಭಿಲಾಷೆಗಳಿಗೆ ಬಿಟ್ಟುಬಿಟ್ಟರು. ಅವರ ಸ್ತ್ರೀಯರು, ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.


ದೇವರ ಅರಿವೇ ಇಲ್ಲದ ಅನ್ಯಜನರಂತೆ ಕಾಮಾತಿರೇಕದಿಂದ ವರ್ತಿಸಬಾರದು.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.


ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಮೊಗ್ಗುಗಳೂ ಕೊಂಬೆಗಳೂ ಸಹಿತವಾದ ದೀಪವೃಕ್ಷವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು