Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:1 - ಕನ್ನಡ ಸತ್ಯವೇದವು C.L. Bible (BSI)

1 ಯಜಮಾನರೇ, ಸ್ವರ್ಗಲೋಕದಲ್ಲಿ ನಿಮಗೂ ಒಬ್ಬ ಒಡೆಯನಿದ್ದಾನೆಂಬುದನ್ನು ತಿಳಿದುಕೊಂಡು ನಿಮ್ಮ ಮನೆಯಾಳುಗಳನ್ನು ನ್ಯಾಯಬದ್ಧ ರೀತಿಯಲ್ಲಿ ನೋಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ, ಯೋಗ್ಯವಾದದ್ದನ್ನೂ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಯಜಮಾನಾನು, ತುಮ್ಚ್ಯಾ ಸೆವಕಾಕ್ನಿ ಬರೆ ಅನಿ ಸಮಾ ಹೊತ್ತೆಚ್ ಕರಾ, ಕಶ್ಯಾಕ್ ಮಟ್ಲ್ಯಾರ್ ಸರ್‍ಗಾತ್ ತುಮ್ಕಾಬಿ ಎಕ್ ಯಜಮಾನ್ ಹಾಯ್ ಮನ್ತಲೆ ಯಾದ್ ಥವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:1
22 ತಿಳಿವುಗಳ ಹೋಲಿಕೆ  

ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


“ಆದರೂ ಅವನು ರಾಜಪದವಿಯನ್ನು ಪಡೆದು ಹಿಂದಿರುಗಿ ಬಂದ. ತನ್ನಿಂದ ಹಣಪಡೆದ ಸೇವಕರು ವ್ಯಾಪಾರಮಾಡಿ ಎಷ್ಟೆಷ್ಟು ಲಾಭಗಳಿಸಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ಕೂಡಲೇ ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.


ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು