Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:12 - ಕನ್ನಡ ಸತ್ಯವೇದವು C.L. Bible (BSI)

12 ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎಪಾಪ್ರಾಸಾನ್ಬಿ ತುಮ್ಕಾ ನಮಸ್ಕಾರ್ ಸಾಂಗ್ಲಾ. ತೊ ಜೆಜು ಕ್ರಿಸ್ತಾಚೊ ಸೆವಕ್ ತೊ ತುಮ್ಚ್ಯಾತ್ಲೊಚ್ ಎಕ್ಲೊ. ತುಮಿ ವಿಶ್ವಾಸಾಚ್ಯಾ ವಾಡಾವಳಿತ್ ಅನಿ ಕ್ರಿಸ್ತಾಚ್ಯಾ ಇಚ್ಚೆತ್ ತುಮಿ ಘಟ್ ರ್‍ಹಾವ್ಚೆ ಮನುನ್ ಕನ್ನಾಬಿ ಮಾಗ್ನಿತ್ನಿ ಹೊರಾಟ್ ಕರಿತ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:12
30 ತಿಳಿವುಗಳ ಹೋಲಿಕೆ  

ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.


“ಕ್ರಿಸ್ತಯೇಸುವಿಗೋಸ್ಕರ ನನ್ನ ಜೊತೆಯಲ್ಲಿ ಸೆರೆಮನೆಯಲ್ಲಿರುವ ಎಪಫ್ರನೂ ನನ್ನ ಸಹೋದ್ಯೋಗಿಗಳಾದ ಮಾರ್ಕ, ಅರಿಸ್ತಾರ್ಕ, ದೇಮ ಮತ್ತು ಲೂಕನು ನಿಮಗೆ ಶುಭಾಶಯಗಳನ್ನು ಕಳುಹಿಸುತ್ತಾರೆ.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಈ ಶುಭಸಂದೇಶವನ್ನು ಕ್ರಿಸ್ತಯೇಸುವಿನ ನಂಬಿಕಸ್ಥ ದಾಸನೂ ನಮ್ಮ ಜೊತೆಯ ಸೇವಕನೂ ಆದ ಎಪಫ್ರನಿಂದ ಕಲಿತುಕೊಂಡಿದ್ದೀರಿ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳ ವರದಿಯನ್ನು ಬರೆದಿಡಲು ಹಲವರು ಪ್ರಯತ್ನಿಸಿದ್ದಾರೆ.


ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.


ಆತನ ಜೊತೆಯಲ್ಲಿ ನಂಬಿಕಸ್ಥನಾದ ಪ್ರಿಯ ಸಹೋದರ ಒನೇಸಿಮನನ್ನು ಕಳುಹಿಸುತ್ತಿದ್ದೇನೆ. ಇವನು ನಿಮ್ಮ ಊರಿನ ಸಭೆಗೆ ಸೇರಿದವನು. ಇಲ್ಲಿ ನಡೆಯುವುದನ್ನೆಲ್ಲಾ ಇವರು ನಿಮಗೆ ತಿಳಿಸುವರು.


ಈ ಸಹನೆ ಸಿದ್ಧಿಗೆ ಬಂದಾಗ ನೀವು ಯಾವ ಕುಂದುಕೊರತೆ ಇಲ್ಲದೆ, ಪರಿಪೂರ್ಣರೂ ಸರ್ವಗುಣ ಸಂಪನ್ನರೂ ಆಗುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು