Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:17 - ಕನ್ನಡ ಸತ್ಯವೇದವು C.L. Bible (BSI)

17 ತನಗೆ ಒಪ್ಪಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂಬುದಾಗಿ ಅರ್ಖಿಪ್ಪನಿಗೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅರ್ಖಿಪ್ಪನಿಗೆ - ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅರ್ಖಿಪ್ಪನಿಗೆ, “ನೀನು ಕರ್ತ ಯೇಸುವಿನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವುದಕ್ಕೆ ಎಚ್ಚರವಾಗಿರಬೇಕು!” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅರ್ಕಿಪ್ಪಾ ಮನ್ತಲ್ಯಾಕ್ ಧನಿಯಾನ್ ತುಕಾ ಒಪ್ಸುನ್ ದಿಲ್ಲಿ ಸೆವಾ ಚುಕಿ ನಸ್ತಾನಾ ಫುರಾ ಕರುಚೆ ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:17
19 ತಿಳಿವುಗಳ ಹೋಲಿಕೆ  

ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದವನು. ನಾವು ಕೈಗೊಂಡಿರುವ ಸೇವೆಯಲ್ಲಿ ಭಾಗಿಯಾಗಲು ಆಯ್ಕೆಯಾಗಿದ್ದವನು.


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ.


ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.


ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ದೇವಸ್ಥಾನದ ವ್ಯವಹಾರವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. ಆಗ ದೇವರ ಕೋಪ ಮತ್ತೆ ಇಸ್ರಯೇಲರ ಮೇಲೆ ಬಾರದು.


ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?


ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು