Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:18 - ಕನ್ನಡ ಸತ್ಯವೇದವು C.L. Bible (BSI)

18 ಇದನ್ನು ಪೌಲನಾದ ನಾನೇ ಸ್ವತಃ ಬರೆಯುತ್ತಿದ್ದೇನೆ. ನಾನು ಸೆರೆಯಲ್ಲಿದ್ದೇನೆ ಎಂಬುದು ನಿಮಗೆ ನೆನಪಿರಲಿ. ಶುಭಾಶಯಗಳು! ದೈವಾನುಗ್ರಹ ನಿಮ್ಮಲ್ಲಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿಮಗೆ ನನ್ನ ವಂದನೆಗಳು. ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದು ಪೌಲನಾದ ನಾನೇ ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತುಮ್ಕಾಬಿ ಮಾಜೊ ನಮಸ್ಕಾರ್, ಪಾವ್ಲು ಮನ್ತಲ್ಯಾ ಮಿಯಾ ಸ್ವತಾ ಮಾಜ್ಯಾ ಹಾತಿನ್ ಹೆ ಲಿವ್ಲಾ, ಬಂಧಿಖಾನ್ಯಾತ್ ಹೊತ್ತ್ಯಾ ಮಾಜಿ ಯಾದ್ ಕರಾ. ದೆವಾಚಿ ಕುರ್ಪಾ ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:18
14 ತಿಳಿವುಗಳ ಹೋಲಿಕೆ  

ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಕೆಲವರು ಇಂಥ ಕಪಟಜ್ಞಾನವನ್ನು ಅವಲಂಬಿಸಿ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ದೇವರ ಅನುಗ್ರಹ ನಿಮ್ಮಲ್ಲಿರಲಿ!


ಪೌಲನಾದ ನಾನು ನನ್ನ ಸ್ವಂತ ಕೈಬರಹದಿಂದ ನಿಮಗೆ ವಂದನೆಯನ್ನು ಬರೆಯುತ್ತಿದ್ದೇನೆ.


ದೇವರ ಕೃಪಾಶೀರ್ವಾದ ನಿಮ್ಮೆಲ್ಲರಲ್ಲೂ ಇರಲಿ!


ನನ್ನ ಜೊತೆ ಇರುವವರೆಲ್ಲ ನಿನಗೆ ಶುಭಾಶಯಗಳನ್ನು ಕಳಿಸಿದ್ದಾರೆ. ಅಲ್ಲಿ ನಿನ್ನೊಂದಿಗಿರುವ ಕ್ರೈಸ್ತಬಾಂಧವರಿಗೂ ನನ್ನ ವಂದನೆಗಳನ್ನು ಸಲ್ಲಿಸು. ದೇವರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು!


ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಈ ಪತ್ರವನ್ನು ಬರೆದುಕೊಟ್ಟ ತೆರ್ತ್ಯನೆಂಬ ನಾನೂ ನಿಮ್ಮನ್ನು ಪ್ರಭುವಿನಲ್ಲಿ ವಂದಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು