Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:2 - ಕನ್ನಡ ಸತ್ಯವೇದವು C.L. Bible (BSI)

2 ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರಾರ್ಥನೆಯನ್ನು ತಪ್ಪದೆ ಮಾಡಿರಿ, ನೀವು ಪ್ರಾರ್ಥಿಸುವಾಗ, ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಚ್ಚರವಾಗಿದ್ದು ಕೃತಜ್ಞತೆ ಉಳ್ಳವರಾಗಿ ಪ್ರಾರ್ಥನೆಯಲ್ಲಿ ನಿರತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಚುಕಿನಸ್ತಾನಾ ಮಾಗ್ನಿ ಕರಾ, ತುಮಿ ಮಾಗ್ನಿ ಕರ್‍ತಾನಾ ಜಾಗ್ರುತಿನ್ ರ್‍ಹಾವ್ನ್, ದೆವಾಕ್ ಧನ್ಯವಾದ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:2
21 ತಿಳಿವುಗಳ ಹೋಲಿಕೆ  

ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಪ್ರೀತಿಗೆ ಪ್ರತಿಯಾಗಿ ಮಾಡುತಿಹರು ಆಪಾದನೆ I ಆದರೂ ಮಾಡುತ್ತಿರುವೆ ಅವರಿಗಾಗಿ ಪ್ರಾರ್ಥನೆ II


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.


ಆ ಕಾಲ ಯಾವಾಗ ಬರುವುದು ಎಂದು ನಿಮಗೆ ತಿಳಿಯದ್ದರಿಂದ ಎಚ್ಚರಿಕೆಯಿಂದಿರಿ, ಜಾಗರೂಕರಾಗಿರಿ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ನೀನಾದರೋ ದೇವರ ಭಯಭಕ್ತಿಯನ್ನು ಕೆಡಿಸುತ್ತಿರುವೆ ದೇವರ ಧ್ಯಾನಕ್ಕೆ ಅಡ್ಡಿಬರುತ್ತಿರುವೆ.


ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.


ಹನ್ನಳು ಬಹಳ ಹೊತ್ತಿನವರೆಗೆ ಸರ್ವೇಶ್ವರನ ಮುಂದೆ ಪ್ರಾರ್ಥನೆ ಸಲ್ಲಿಸುತ್ತಾ ಇದ್ದಳು. ಏಲಿ ಆಕೆಯ ಬಾಯನ್ನು ಗಮನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು