Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:6 - ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ಸಂಭಾಷಣೆ ಯಾವಾಗಲೂ ಇಂಪಾಗಿಯೂ ರಸವತ್ತಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರಹೇಳಬೇಕೋ ಅದನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮಿ ಬೊಲ್ತಾನಾ, ದಯೆನ್ ಭರಲ್ಲೆ ಅನಿ ಮನಾಕ್ ಬರೆ ದಿಸ್ತಲ್ಯಾ ಗೊಸ್ಟಿಯಾ ಹೊವ್ನ್ ರಾಂವ್ದಿತ್, ಅನಿ ಬುದ್ದ್ ಹೊತ್ತೆ ಹೊವ್ನ್ ಬೊಲಾ. ತನ್ನಾ ಹರ್ ಎಕ್ಲ್ಯಾಕ್ಬಿ ಪಾಜೆ ಹೊಲ್ಲ್ಯಾ ಸಾರ್ಕೆ ಜವಾಬ್ ದಿವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:6
33 ತಿಳಿವುಗಳ ಹೋಲಿಕೆ  

ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.


ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿಂದ ಅದನ್ನು ಪುನಃ ರುಚಿಗೊಳಿಸಲಾದೀತು? ನೀವು ಉಪ್ಪಿನಂತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು.


ಸಂತೈಸುವ ನಾಲಿಗೆ ಜೀವವೃಕ್ಷಕ್ಕೆ ಸಮಾನ; ಹಿಂಸಾತ್ಮಕ ನಾಲಿಗೆ ಮನಮುರಿತಕ್ಕೆ ಸಾಧನ.


ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


“ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ.”


ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.


ಮಾತಾಡುವೆನು ನಿನ್ನ ಆಜ್ಞೆಗಳ ವಿಷಯವಾಗಿ I ಅರಸುಗಳ ಮುಂದೆಯು ನಿಸ್ಸಂಕೋಚವಾಗಿ II


ಹಾಡಿ ಪಾಡಿ ಹೊಗಳಿರಿ ಪ್ರಭುವನು I ಧ್ಯಾನಿಸಿ ನೀವು ಆತನ ಪವಾಡಗಳನು II


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II


ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.


ನೈವೇದ್ಯವಾಗಿ ಸಮರ್ಪಿಸುವ ಎಲ್ಲ ಆಹಾರ ಪದಾರ್ಥಗಳಿಗೂ ಉಪ್ಪು ಹಾಕಿಯೆ ಸಮರ್ಪಿಸಬೇಕು. ಉಪ್ಪು ಸರ್ವೇಶ್ವರನ ಸಂಗಡ ನಿಮಗಿರುವ ಒಡಂಬಡಿಕೆಯ ಸೂಚನೆ. ಆದ್ದರಿಂದ ಅದು ಯಾವ ನೈವೇದ್ಯ ದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲ ಪದಾರ್ಥಗಳಲ್ಲಿಯೂ ಉಪ್ಪು ಸೇರಿಸಿಯೇ ಇರಬೇಕು.


ನೀನು ಅವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಿದಾಗ ಯಾಜಕರು ಅವುಗಳ ಮೇಲೆ ಉಪ್ಪನ್ನು ಚೆಲ್ಲಿ, ಸರ್ವೇಶ್ವರನಿಗಾಗಿ ದಹನಬಲಿ ಒಪ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು