Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:8 - ಕನ್ನಡ ಸತ್ಯವೇದವು C.L. Bible (BSI)

8 ನನ್ನ ವಿಷಯದಲ್ಲಿ ನಿಮಗೆ ಎಲ್ಲವನ್ನೂ ತಿಳಿಸಿ, ನಿಮ್ಮನ್ನು ಹುರಿದುಂಬಿಸಿ, ಪ್ರೋತ್ಸಾಹಿಸುವುದಕ್ಕಾಗಿ ಆತನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ನನ್ನ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದಕಾರಣವೇ ನಾನು ಅವನನ್ನು ಕಳುಹಿಸುತ್ತಿದ್ದೇನೆ. ನಾವು ಹೇಗಿರುವೆವು ಎಂಬುದನ್ನು ನೀವು ತಿಳಿದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮನ್ನು ಪ್ರೋತ್ಸಾಹಿಸಲು ನಾನು ಅವನನ್ನು ಒನೇಸಿಮನ ಜೊತೆಯಲ್ಲಿ ಕಳುಹಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ನಮ್ಮ ಪರಿಸ್ಥಿತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯಾ ಕಾರನಾಸಾಟ್ನಿಚ್ ಮಿಯಾ ತೆಕಾ ಧಾಡುನ್ ದಿವ್ಕ್ ಲಾಗ್ಲಾ, ಅಮಿ ಕಶೆ ಹಾಂವ್ ಮನುನ್, ತುಮ್ಕಾಬಿ ಕಳುಚೆ ಮನ್ತಲಿ ಮಾಜಿ ಆಶಾ, ತುಮ್ಕಾ ಉಮ್ಮೆದ್ ಭರುಕ್ ಮನುನ್ ಮಿಯಾ ತೆಕಾ ಓನೆಜಿಮಸ್ ಮನ್ತಲ್ಯಾಚ್ಯಾ ವಾಂಗ್ಡಾ ಧಾಡುನ್ ದಿವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:8
16 ತಿಳಿವುಗಳ ಹೋಲಿಕೆ  

ನಮ್ಮ ಸಮಾಚಾರವನ್ನು ನಿಮಗೆ ತಿಳಿಸಲೆಂದು ಹಾಗೂ ನಿಮ್ಮನ್ನು ಉತ್ತೇಜಿಸಲೆಂದು ಆತನನ್ನು ನಿಮ್ಮಲ್ಲಿಗೆ ಕಳುಹಿಸಿದ್ದೇನೆ.


ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ಆದ್ದರಿಂದ, ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿ.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು; ಪ್ರೋತ್ಸಾಹಿಸಿದೆವು.


ಎಪಫ್ರೋದಿತನನ್ನು ನಿಮ್ಮ ಬಳಿಗೆ ಕಳುಹಿಸಲು ತವಕದಿಂದಿದ್ದೇನೆ. ಅವನನ್ನು ಕಂಡು ನಿಮಗೆ ಆನಂದವಾಗುವುದು, ನನ್ನ ದುಃಖವೂ ಶಮನವಾಗುವುದು.


ನನ್ನ ಕೋರಿಕೆಯಂತೆಯೇ ತೀತನು ನಿಮ್ಮ ಬಳಿಗೆ ಬಂದದ್ದು; ಆತನ ಸಂಗಡ ಒಬ್ಬ ಸಹೋದರನನ್ನೂ ಕಳುಹಿಸಿದೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ಪ್ರಯೋಜನ ಪಡೆದದ್ದುಂಟೇ? ಎಂದಿಗೂ ಇಲ್ಲ. ನಾವಿಬ್ಬರು ಒಂದೇ ಮನೋಭಾವನೆಯಿಂದ ವರ್ತಿಸಲಿಲ್ಲವೇ? ಒಂದೇ ರೀತಿಯಲ್ಲಿ ನಡೆದುಕೊಳ್ಳಲಿಲ್ಲವೇ?


ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.


ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.


ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.


ನಿಮ್ಮ ದೇವರು ಇಂತೆನ್ನುತ್ತಾರೆ : “ಸಂತೈಸಿ, ನನ್ನ ಜನರನ್ನು ಸಂತೈಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು