Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:10 - ಕನ್ನಡ ಸತ್ಯವೇದವು C.L. Bible (BSI)

10 ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆ ಜಾಲ್ಯಾರ್ ಅತ್ತಾ, ಕೊನಾಕ್ ಮಿಯಾ ಹೆ ಬರೆ ದಿಸಿ ಸಾರ್ಕೆ ಕರುಕ್ ಲಾಗ್ಲಾ ಮನುನ್ ತುಮ್ಕಾ ದಿಸ್ತಾ ಮಾನ್ಸಾಕ್ ಕಾಯ್ ದೆವಾಕ್? ಮಿಯಾ ಮಾನ್ಸಾಂಚ್ಯಾಕ್ನಾ ಹೊಗ್ಳುನ್ ಘೆವ್ಚೆ ಮನುನ್ ತುಮಿ ಚಿಂತಲ್ಲ್ಯಾಸಿ ಕಾಯ್? ಅನಿಬಿ ಮಿಯಾ ಮಾನ್ಸಾಂಚ್ಯಾಕ್ನಾ ಹೊಗ್ಳುನ್ ಘೆವ್ಚೆ ಹೊಲ್ಯಾರ್ ಮಿಯಾ ಕ್ರಿಸ್ತಾಚೊ ಸೆವಕ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:10
20 ತಿಳಿವುಗಳ ಹೋಲಿಕೆ  

ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರಂಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ.


ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ.


ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಛೆಯನ್ನು ಹೃದಯಪೂರ್ವಕವಾಗಿ ಈಡೇರಿಸಿರಿ.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ.


ಯಾರು ಅಂತರಂಗದಲ್ಲಿ ಯೆಹೂದ್ಯನಾಗಿರುತ್ತಾನೋ ಅವನೇ ನಿಜವಾದ ಯೆಹೂದ್ಯನು. ಅಂಥವನಿಗೆ ಅಂತರ್ಯದಲ್ಲಿ ಸುನ್ನತಿಯಾಗಿರುತ್ತದೆ. ಇದು ಲಿಖಿತ ಧರ್ಮಶಾಸ್ತ್ರದಿಂದ ಆದದ್ದಲ್ಲ, ದೇವರಾತ್ಮ ಅವರಿಂದ ಆದ ಕಾರ್ಯ; ಇಂಥವನು ಮೆಚ್ಚುಗೆಯನ್ನು ಪಡೆಯುವುದು ಮನುಷ್ಯನಿಂದಲ್ಲ, ದೇವರಿಂದ.


ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು.


ನಾವು ತಪ್ಪಿತಸ್ಥರಲ್ಲವೆಂದು ನಿಮ್ಮ ಮುಂದೆ ಸಮರ್ಥಿಸಿಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇವೆಂದು ನೆನಸಬೇಡಿ. ದೇವರ ಸನ್ನಿಧಿಯಲ್ಲಿ, ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಹೇಳುತ್ತೇನೆ: ಪ್ರಿಯ ಸಹೋದರರೇ, ನಾವು ಮಾಡುತ್ತಿರುವುದೆಲ್ಲ ನಿಮ್ಮ ಆಧ್ಯಾತ್ಮಿಕ ಅಭಿವೃದ್ಧಿಗಾಗಿಯೇ.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ಈ ಸುದ್ದಿ ರಾಜ್ಯಪಾಲನ ಕಿವಿಗೆ ಬಿದ್ದರೆ, ನಾವು ಅವರನ್ನು ಸಮಾಧಾನಪಡಿಸುತ್ತೇವೆ; ನಿಮಗೇನೂ ಆಗದಂತೆ ನೋಡಿಕೊಳ್ಳುತ್ತೇವೆ,’ ಎಂದು ಹೇಳಿದರು.


ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.


ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.


“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು